
ವಾಷಿಂಗ್ ಟನ್[ಸೆ.2] ಉಗ್ರವಾದ ತಡೆಯಲು ವಿಫಲವಾದ ಪಾಕಿಸ್ತಾನಕ್ಕೆ ದೊಡ್ಡ ಮುಖಭಂಗವಾಗಿದೆ. ಪೆಂಟಗನ್ ನಲ್ಲಿ ನಡೆದ ಮಹತ್ವದ ರಕ್ಷಣಾ ಇಲಾಖೆಯ ಸಭೆಯಲ್ಲಿ ಅಮೆರಿಕದಿಂದ ಪಾಕಿಸ್ತಾನ ಸರ್ಕಾರಕ್ಕೆ ನೀಡಲಾಗುತ್ತಿದ್ದ 300 ಮಿಲಿಯನ್ ಡಾಲರ್ ಮೊತ್ತದ ಆರ್ಥಿಕ ನೆರವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ.
ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಪೆಂಟಗನ್ ವಕ್ತಾರರಾದ ಫಿಲ್ ಸ್ಟೆವಾರ್ಟ್ ಮತ್ತು ಇಡ್ರೀಸ್ , ಉಗ್ರ ನಿಗ್ರಹ ವಿಚಾರದಲ್ಲಿ ಪಾಕಿಸ್ತಾನ ಸರ್ಕಾರದ ಪ್ರಯತ್ನಗಳು ನಿರಾಶಾದಾಯಕವಾಗಿದೆ. ಈ ಬಗ್ಗೆ ಈ ಹಿಂದೆ ಸಾಕಷ್ಟು ಬಾರಿ ಅಮೆರಿಕ ಮನವಿ ಮಾಡಿದ್ದರೂ ಹೇಳಿಕೊಳ್ಳುವಂತಹ ಪ್ರಗತಿಯಾಗಿಲ್ಲ. ಹೀಗಾಗಿ ಟ್ರಂಪ್ ಸರ್ಕಾರ ಅನಿವಾರ್ಯವಾಗಿ ಆರ್ಥಿಕ ಭದ್ರತಾ ನೆರವನ್ನು ರದ್ದುಗೊಳಿಸಿದೆ ಎಂದು ತಿಳಿಸಿದ್ದಾರೆ.
ಪಾಕಿಸ್ತಾನದಲ್ಲಿ ಉಗ್ರರು ನೆಲೆ ಕಂಡುಕೊಂಡಿದ್ದು ಇಡೀ ಪ್ರಪಂಚಕ್ಕೆ ಮಾರಕವಾದ ಕೆಲಸ ಮಾಡುತ್ತಿದ್ದಾರೆ ಎಂದು ಅಮೆರಿಕ ಹೇಳಿದೆ. ಒಂದು ಕಡೆ ಪಾಕ್ ನಲ್ಲಿ ಹೊಸ ಸರಕಾರ ಬಂದಿದ್ದು ಇದೇ ಸಂದರ್ಭದಲ್ಲಿ ನೆರವು ಕಡಿತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ