
ನವದೆಹಲಿ(ಸೆ.08): ವಾಹನ ಚಲಾಯಿಸುವಾಗ ಮೊಬೈಲ್ ಫೋನ್ ಬಳಸಬೇಡಿ ಎಂದು ಸರ್ಕಾರಗಳು ಎಚ್ಚರಿಕೆಗಳನ್ನು ನೀಡುತ್ತಿದ್ದರೂ ಅದಕ್ಕೆ ಜನರು ಕಿವಿಗೊಟ್ಟಂತೆ ಕಾಣುತ್ತಿಲ್ಲ. ಆದರೆ ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ರಸ್ತೆ ಅಪಘಾತಗಳ ವಾರ್ಷಿಕ ಅಂಕಿ-ಅಂಶಗಳ ಪ್ರಕಾರ ಎರಡು ಸಾವಿರಕ್ಕೂ ಹೆಚ್ಚು ಮಂದಿ ರಸ್ತೆ ಅಫಘಾತದಲ್ಲಿ ಜೀವ ಕಳೆದುಕೊಂಡಿದ್ದಾರೆ ಎಂಬ ಆತಂಕಕಾರಿ ಅಂಶ ಹೊರಬಿದ್ದಿದೆ.
ಮೊಬೈಲ್ ಬಳಸುತ್ತಲೇ ವಾಹನ ಚಲಾಯಿಸಿದ ಪರಿಣಾಮ ಕಳೆದ ವರ್ಷ 2,138 ಮಂದಿ ಮೃತಪಟ್ಟಿದಾರೆ ಎಂಬ ಅಂಶ ಕೇಂದ್ರ ಸರ್ಕಾರದ ರಸ್ತೆ ಅಪಘಾತಗಳ ವಾರ್ಷಿಕ ವರದಿಯಿಂದ ಬಯಲಾಗಿದೆ.
ವಾಹನ ಚಾಲನೆ ಮಾಡುವ ವೇಳೆ ಮೊಬೈಲ್ ಬಳಕೆಯಿಂದಾಗಿ 2016ರಲ್ಲಿ ಒಟ್ಟು 4976 ರಸ್ತೆ ಅಪಘಾತಗಳು ಸಂಭವಿಸಿದ್ದು, 2138 ಮಂದಿ ಬಲಿಯಾಗಿದಾರೆ. ಅಲ್ಲದೇ 4,746 ಮಂದಿ ಗಾಯಗೊಂಡಿದ್ದಾರೆ.
ರಾಂಗ್ ಸೈಡ್'ನಲ್ಲಿ ವಾಹನ ಚಲಾಯಿಸಿದ ಪರಿಣಾಮ 17,654 ರಸ್ತೆ ಅಪಘಾತ ಸಂಭವಿಸಿ 5705 ಮಂದಿ ಮೃತಪಟ್ಟಿದಾರೆ. ದೇಶದಲ್ಲಿ ಪ್ರತೀ ಗಂಟೆಗೆ ಸರಾಸರಿ 17 ಮಂದಿ ಅಪಘಾತಗಳಿಂದ ಸಾವನ್ನಪ್ಪುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.