ಉತ್ತರ ಪ್ರದೇಶದಲ್ಲಿ 5ನೇ ಹಂತದ ಮತದಾನ: 51 ಕ್ಷೇತ್ರಗಳ 607 ಅಭ್ಯರ್ಥಿಗಳ ಭವಿಷ್ಯ ಇಂದೇ ನಿರ್ಧಾರ

Published : Feb 27, 2017, 03:50 AM ISTUpdated : Apr 11, 2018, 12:44 PM IST
ಉತ್ತರ ಪ್ರದೇಶದಲ್ಲಿ 5ನೇ ಹಂತದ ಮತದಾನ: 51 ಕ್ಷೇತ್ರಗಳ 607 ಅಭ್ಯರ್ಥಿಗಳ ಭವಿಷ್ಯ ಇಂದೇ ನಿರ್ಧಾರ

ಸಾರಾಂಶ

ತೀವ್ರ ಕುತೂಹಲ ಕೆರಳಿಸಿರುವ ಉತ್ತರ ಪ್ರದೇಶ ವಿಧಾನಸಭೆಗೆ 5ನೇ ಹಂತದ ಮತದಾನ ನಡೆಯುತ್ತಿದೆ. 11 ಜಿಲ್ಲೆಗಳ 51 ಕ್ಷೇತ್ರಗಳಿಗೆ ಮತದಾನ ಆರಂಭವಾಗಿದೆ. 18,822 ಮತ ಕೇಂದ್ರಗಳನ್ನು ತೆರೆಯಲಾಗಿದ್ದು, ಇದರಲ್ಲಿ 2,351 ಮತಗಟ್ಟೆಗಳಿಗೆ ವಿಶೇಷ ಭದ್ರತೆ ಒದಗಿಸಲಾಗಿದೆ.

ಉತ್ತರ ಪ್ರದೇಶ(ಫೆ.27): ತೀವ್ರ ಕುತೂಹಲ ಕೆರಳಿಸಿರುವ ಉತ್ತರ ಪ್ರದೇಶ ವಿಧಾನಸಭೆಗೆ 5ನೇ ಹಂತದ ಮತದಾನ ನಡೆಯುತ್ತಿದೆ. 11 ಜಿಲ್ಲೆಗಳ 51 ಕ್ಷೇತ್ರಗಳಿಗೆ ಮತದಾನ ಆರಂಭವಾಗಿದೆ. 18,822 ಮತ ಕೇಂದ್ರಗಳನ್ನು ತೆರೆಯಲಾಗಿದ್ದು, ಇದರಲ್ಲಿ 2,351 ಮತಗಟ್ಟೆಗಳಿಗೆ ವಿಶೇಷ ಭದ್ರತೆ ಒದಗಿಸಲಾಗಿದೆ.

607 ಅಭ್ಯರ್ಥಿಗಳು ಅಭ್ಯರ್ಥಿಗಳಿದ್ದು, 1.81 ಕೋಟಿ ಮತದಾರರು ಈ ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಮತಗಟ್ಟೆಗಳಿಗೆ ವ್ಯಾಪಕ ಭದ್ರತೆ ಏರ್ಪಡಿಸಲಾಗಿದ್ದು, 905 ಡಿಜಿಟಲ್‌ ಕ್ಯಾಮರಾ, 978 ವೀಡಿಯೋ ಕ್ಯಾಮರಾ ಅಳವಡಿಸಲಾಗಿದೆ. ಅಲ್ಲದೇ 1792 ಕೇಂದ್ರಗಳಲ್ಲಿ ವೆಬ್‌ ವೋಟಿಂಗ್‌ ಜಾರಿಯಲ್ಲಿರಲಿದೆ.

ಮುಖ್ಯವಾಗಿ ಸೋನಿಯಾ ಗಾಂಧಿ ಪ್ರತಿನಿಧಿಸುವ ಅಮೆಥಿಯಲ್ಲಿ ಇಂದೇ ಮತದಾನ ನಡೆಯಲಿದೆ. ಇದಲ್ಲದೇ ಬಲರಾಮ್‌ಪುರ, ಗೊಂಡಾ, ಫೈಜಾಬಾದ್‌, ಅಂಬೇಡ್ಕರ್‌ ನಗರ, ಶ್ರವಸ್ತಿ, ಸಿದ್ದಾರ್ಥನಗರ, ಬಸ್ತಿ, ಸಂತ ಕಬೀರನಗರ್‌, ಸುಲ್ತಾನ್‌ಪುರ ಜಿಲ್ಲೆಗಳಲ್ಲಿ ಮತದಾನ ನಡೆಯುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಪ್ಪಳದಲ್ಲಿ ಭೀಕರ ಅಪಘಾತ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ವನ್ಯಜೀವಿ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಕ್ರಮ: ಸಚಿವ ಈಶ್ವರ್‌ ಖಂಡ್ರೆ