
ನವದೆಹಲಿ(ಅ.03): ಅತ್ತ ಅಮೆರಿಕದಲ್ಲಿ ಬಂದೂಕುಧಾರಿ ವ್ಯಕ್ತಿಯೊಬ್ಬ ಸಂಗೀತ ಕಾರ್ಯಕ್ರಮದ ಮೇಲೆ ಗುಂಡಿನ ಮಳೆಗರೆದು 50ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದ ಸಂದರ್ಭದಲ್ಲೇ ಭಾರತದಲ್ಲಿ ಗನ್ ಲೈಸೆನ್ಸ್‌ಗೆ ಸಂಬಂಧಿಸಿದ ಮಾಹಿತಿಯೊಂದು ಹೊರಬಿದ್ದಿದೆ.
ದೇಶದಲ್ಲಿ 33.69 ಲಕ್ಷ ಜನರು ಗನ್‌ಲೈಸೆನ್ಸ್ ಪಡೆದಿದ್ದು, ಅದರಲ್ಲಿ ಕರ್ನಾಟಕದವರೇ 1.13 ಲಕ್ಷ ಮಂದಿ ಇದ್ದಾರೆ. ಅತಿ ಹೆಚ್ಚು ಗನ್ ಲೈಸೆನ್ಸ್ ಹೊಂದಿರುವ ವ್ಯಕ್ತಿಗಳು ನೆಲೆಸಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ದೇಶದಲ್ಲೇ ಏಳನೇ ಸ್ಥಾನದಲ್ಲಿದೆ. ಕೇಂದ್ರ ಗೃಹ ಸಚಿವಾಲಯದ ಅಂಕಿ-ಅಂಶಗಳಲ್ಲಿ ಈ ಮಾಹಿತಿ ಇದೆ.
2016ರ ಡಿ.31ಕ್ಕೆ ಅನುಗುಣವಾಗಿ ದೇಶದಲ್ಲಿ 33 ಲಕ್ಷ ಗನ್ ಲೈಸೆನ್ಸ್ ಹೊಂದಿದವರಿದ್ದಾರಾದರೂ ಅದರಲ್ಲಿ ಸಿಂಹಪಾಲು, ಜನಸಂಖ್ಯೆಯಲ್ಲಿ ದೇಶದಲ್ಲೇ ಅತಿದೊಡ್ಡ ರಾಜ್ಯವಾಗಿರುವ ಹಾಗೂ ಕಾನೂನು- ಸುವ್ಯವಸ್ಥೆಯ ಸಮಸ್ಯೆ ಎದುರಿಸುತ್ತಿರುವ ಉತ್ತರಪ್ರದೇಶದ್ದು. ಆ ರಾಜ್ಯದಲ್ಲಿ ಅಧಿಕೃತ ಶಸ್ತ್ರಾಸ್ತ್ರ ಪರವಾನಗಿ ಪಡೆದವರ ಸಂಖ್ಯೆ 12.77 ಲಕ್ಷದಷ್ಟಿದೆ. ಕಾಶ್ಮೀರದಲ್ಲಿ 3.69 ಲಕ್ಷ ಗನ್ ಲೈಸೆನ್ಸ್'ದಾರರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.