
ನವದೆಹಲಿ (ಜ.14): ಉತ್ತರ ಪ್ರದೇಶವು ಕುಟುಂಬ ರಾಜಕಾರಣದ ಪ್ರತಿಷ್ಠೆ ಕಣವಾಗಿದ್ದು, ಡಿಂಪಲ್ ಯಾದವ್ ಅಪ್ಪ-ಮಗನ ಜಗಳದಿಂದ ಹೊರಗುಳಿದಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಪ್ರಬಲ ಸ್ಪರ್ಧಿಯಾಗಿ ಹೊರಹೊಮ್ಮುವ ಸಾಧ್ಯತೆ ದಟ್ಟವಾಗಿದೆ ಎಂದು ಪಕ್ಷದ ಆಂತರಿಕ ಮೂಲಗಳು ಹೇಳತ್ತಿವೆ.
ಎರಡನೇ ಬಾರಿ ಕನ್ನೂಜ್ ಕ್ಷೇತ್ರದಿಂದ ಸಂಸದೆಯಾಗಿರುವ ಡಿಂಪಲ್ ಯಾದವ್ ಈ ಬಾರಿಯ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಲು ಸಜ್ಜಾಗಿದ್ದಾರೆ. ರಾಜ್ಯ ಚುನಾವಣೆ ಸಂದಿಗ್ಧ ಪರಿಸ್ಥಿತಿಯಲ್ಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಪತಿ ಅಖಿಲೇಶ್ ಯಾದವ್ ರ ಬೆಂಬಲವನ್ನು ಯಾಚಿಸಿದ್ದಾರೆ.
ಪಕ್ಷ ಮತ್ತು ಕುಟುಂಬ ರಾಜಕಾರಣದಲ್ಲಿ ಸಿಲುಕಿರುವ ಅಖಿಲೇಶ್ ಯಾದವ್ ಗೆ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳಲು ತಯಾರಿ ನಡೆಸಲಾಗುತ್ತಿದೆ ಎಂದು ಡಿಂಪಲ್ ಗೌಪ್ಯವಾಗಿ ಸಂದೇಶ ನೀಡಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಎಸ್ ಪಿ ಮುಖ್ಯಸ್ಥ ಮುಲಾಯಂ ಸಿಂಗ್ ವಿರೋಧಿಸಿದ ಬೆನ್ನಲ್ಲೆ ಮೈತ್ರಿಗೆ ಅಖಿಲೇಶ್ ಯಾದವ್ ಬಹಿರಂಗವಾಗಿ ಬೆಂಬಲ ನೀಡಿದ್ದು 403 ವಿಧಾನಸಭಾ ಕ್ಷೇತ್ರಗಳಲ್ಲಿ 300 ಸ್ಥಾನಗಳನ್ನು ಗೆಲ್ಲಲು ಇದು ಸಹಾಯ ಮಾಡಲಿದೆ ಎಂದು ಅಖಿಲೇಶ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.