ಯೋಗಿ ವಿರುದ್ಧ ಆಕ್ರೋಶಗೊಂಡ ಗ್ರಾಮಸ್ಥರು ಪ್ರತಿಭಟಿಸಿದ್ದು ಹೀಗೆ

By Suvarna Web DeskFirst Published Aug 18, 2017, 6:03 PM IST
Highlights

ಪ್ರವಾಹ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ನೀಡಿಲ್ಲವೆಂದು ಆಕ್ರೋಶಗೊಂಡ ಗ್ರಾಮಸ್ಥರು ಜಲ ಸತ್ಯಾಗ್ರಹ ಎನ್ನುವ ವಿನೂತನ ಪ್ರತಿಭಟನೆಯನ್ನು ಮಾಡಿದ್ದಾರೆ.

ಲಕ್ನೋ (ಆ.18): ಪ್ರವಾಹ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ನೀಡಿಲ್ಲವೆಂದು ಆಕ್ರೋಶಗೊಂಡ ಗ್ರಾಮಸ್ಥರು ಜಲ ಸತ್ಯಾಗ್ರಹ ಎನ್ನುವ ವಿನೂತನ ಪ್ರತಿಭಟನೆಯನ್ನು ಮಾಡಿದ್ದಾರೆ.

ಗಂಗಾನದಿಯಲ್ಲಿ ಕುತ್ತಿಗೆವರೆಗೆ ನೀರು ಬರುವಂತೆ ನಿಂತುಕೊಂಡು ಮುಖ್ಯಮಂತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯನ್ನು ವಾಪಸ್ ತೆಗೆದುಕೊಳ್ಳುವಂತೆ ಪ್ರತಿಭಟನಾಕಾರರ ಮನವೊಲಿಸಲು ಅಧಿಕಾರಿಗಳು ಹರ ಸಾಹಸ ಮಾಡಬೇಕಾಯಿತು.  ಕೂಡಲೇ ಪರಿಹಾರ ಕಾರ್ಯಾಚರಣೆಯನ್ನು ಮಾಡುತ್ತೇವೆ ಎಂದು ಅಧಿಕಾರಿಗಳು ಭರವಸೆ ನೀಡಿದ ಬಳಿಕ ತಣ್ಣಗಾಗಿದ್ದಾರೆ. ಪರಿಹಾರ ನೀಡದಿದ್ದರೆ ಮತ್ತೊಮ್ಮೆ ಇದೇ ರೀತಿ ಪ್ರತಿಭಟನೆ ಮಾಡುತ್ತೇವೆ ಎಂದು ಹೆದರಿಸಿದ್ದಾರೆ.

ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಆದಿತ್ಯನಾಥ್ ಬುಧವಾರ ಭೇಟಿ ನೀಡಬೇಕಿತ್ತು. ಕಾರಣಾಂತರದಿಂದ ಕೊನೆ ಕ್ಷಣದಲ್ಲಿ ಭೇಟಿ ರದ್ದು ಮಾಡಿದ್ದರಿಂದ ಗ್ರಾಮಸ್ಥರು ಆಕ್ರೋಶಗೊಂಡಿದ್ದರು.

 

click me!