
ಲಕ್ನೋ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಉತ್ತರ ಪ್ರದೇಶದಲ್ಲಿ 60 ಸಾವಿರ ಕೋಟಿ ವೆಚ್ಚದ 81 ಯೋಜನೆಗಳಿಗೆ ಚಾಲನೆ ನೀಡಿದ್ದು ಇದರಿಂದ ಅತ್ಯಧಿಕ ಪ್ರಮಾಣದಲ್ಲಿ ಉದ್ಯೋಗಾವಕಾಶಗಳು ದೊರಕಲಿವೆ.
ಈ ಯೋಜನೆಗಳಿಂದ ಉತ್ತರ ಪ್ರದೇಶ ದೇಶದ ಅಭಿವೃದ್ಧಿ ಇಂಜಿನ್ ಆಗಿ ಪರಿವರ್ತಿತವಾಗಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಲಕ್ನೋದಲ್ಲಿ ನಡೆದ ಸಮ್ಮೇಳನವೊಂದರಲ್ಲಿ ಮಾತನಾಡಿದ ಅವರು ಪ್ರಧಾನಿ ಮೋದಿ ಅವರ ಯೋಜನೆಗಳಿಂದಾಗಿ ರಾಜ್ಯದಲ್ಲಿ ಒಟ್ಟು 2 ಲಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶ ಶೀಘ್ರ ಅಭಿವೃದ್ಧಿ ಸಾಧಿಸಲು ಈ ಯೋಜನೆಗಳು ಅನುಕೂಲಕಾರಿಯಾಗಲಿವೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಅಲ್ಲದೇ ಈ ಹಿಂದೆ ಅಖಿಲೇಶ್ ಯಾದವ್ ಹಾಗೂ ಮಾಯಾವತಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಐದು ವರ್ಷಗಳಲ್ಲಿ ಈ ಹಿಂದಿನ ಸರ್ಕಾರ ಮಾಡದ ಕಾರ್ಯವನ್ನು ತಮ್ಮ ಸರ್ಕಾರ 5 ತಿಂಗಳಲ್ಲಿಯೇ ಸಾಧಿಸಿದ್ದಾಗಿ ಹೇಳಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.