ಬಿಜೆಪಿ ಹಿರಿಯ ನಾಯಕ ಉತ್ತರಾಖಂಡದ ಹಣಕಾಸು ಸಚಿವ ನಿಧನ

Published : Jun 06, 2019, 12:03 AM IST
ಬಿಜೆಪಿ ಹಿರಿಯ ನಾಯಕ ಉತ್ತರಾಖಂಡದ ಹಣಕಾಸು ಸಚಿವ ನಿಧನ

ಸಾರಾಂಶ

ಬಿಜೆಪಿ ಮತ್ತೊಬ್ಬ ಹಿರಿಯ ನಾಯಕನನ್ನು ಕಳೆದುಕೊಂಡಿದೆ. ವಿದೇಶದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉತ್ತರಾಖಂಡ ಹಣಕಾಸು ಸಚಿವ ಪ್ರಕಾಶ್ ಪಂತ್ ನಿಧನರಾಗಿದ್ದಾರೆ.

ನವದೆಹಲಿ[ಜೂ. 05]  ಉತ್ತರಾಖಂಡದ ಹಣಕಾಸು ಸಚಿವ ಪ್ರಕಾಶ್ ಪಂತ್ ಬುಧವಾರ ಅಮೆರಿಕಾದಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶ ಸಮಸ್ಯೆಗಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿ ಪ್ರಕಾಶ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಉತ್ತರಾಖಂಡದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆಯನ್ನು ಘೋಷಿಸಲಾಗಿದೆ. "ಉತ್ತರಾಖಂಡದ ಹಣಕಾಸು ಸಚಿವ ಶ್ರೀ ಪ್ರಕಾಶ್ ಪಂತ್ ಅವರ ಅಕಾಲಿಕ ಮರಣ ನೋವು ತಂದಿದೆ. ಅವರ ಕೌಶಲ್ಯಗಳು ಬಿಜೆಪಿ ಮತ್ತು ಉತ್ತರಾಖಂಡದ ಪ್ರಗತಿಗೆ ನೆರವಾಗಿದ್ದವು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

1960 ರ ನವೆಂಬರ್ 11 ರಂದು ಉತ್ತರಾಖಂಡದ ಪಿಥೋರಗಡ್ ನಲ್ಲಿ ಜನಿಸಿದ ಪಂತ್ ಉತ್ತರಾಖಂಡ್ ವಿಧಾನಸಭೆಯ ಮೊದಲ ಸ್ಪೀಕರ್ ಆಗಿದ್ದರು. 2017 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಅವರು ಮುಖ್ಯಮಂತ್ರಿಯ ರೇಸ್ ನಲ್ಲಿ ಇದ್ದು ನಂತರ ಹಣಕಾಸು ಖಾತೆ ಜವಾಬ್ದಾರಿ ವಹಿಸಿಕೊಂಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮತಚೋರಿ ವಿರುದ್ಧ ದಿಲ್ಲೀಲಿಂದು ಕಾಂಗ್ರೆಸ್‌ ಬೃಹತ್‌ ಆಂದೋಲನ: ಖರ್ಗೆ, ರಾಹುಲ್‌, ಸಿದ್ದು, ಡಿಕೆಶಿ ಭಾಗಿ
ಮೋದಿ, ಆರ್‌ಸಿ ಮೋಡಿ.. ಕೇರಳದಲ್ಲಿ ಮೊದಲ ಸಲ ಪಾಲಿಕೆ ಚುನಾವಣೇಲಿ ಬಿಜೆಪಿ ಜಯಭೇರಿ