
ಹಾಸನ: ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಪುತ್ರ ಡಾ.ಅರುಣ್ ಸೋಮಣ್ಣ ಕಣಕ್ಕಿಳಿಯಲಿದ್ದಾರೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಘೋಷಿಸಿದ್ದಾರೆ. ಈ ಮೂಲಕ ಬಿಜೆಪಿಯ ಹಿರಿಯ ನಾಯಕ ತಮ್ಮ ಪುತ್ರನ ರಾಜಕೀಯ ಪದಾರ್ಪಣೆಗೆ ವೇದಿಕೆ ಸಜ್ಜುಗೊಳಿಸಲು ಮುಂದಾಗಿದ್ದಾರೆ.
ಅರಸೀಕೆರೆಯಲ್ಲಿ ಗುರುವಾರ ನಡೆದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅರುಣ್ ಸ್ಪರ್ಧೆಗೆ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಗ್ರೀನ್ ಸಿಗ್ನಲ್ ನೀಡಿರುವುದಾಗಿ ತಿಳಿಸಿದರು.
ಇದು ಯಡಿಯೂರಪ್ಪನವರೇ ತೆಗೆದುಕೊಂಡ ತೀರ್ಮಾನವಾಗಿದ್ದು ನನ್ನ ಪುತ್ರನಿಗೆ ಅರಸೀಕೆರೆ ಜನ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು. ಡಾಕ್ಟರ್ ಓದಿರೋ ಮಗನನ್ನು ಬೆಂಗಳೂರು ಅಥವಾ ಚಾಮರಾಜ ನಗರದಲ್ಲಿ ಬೆಳೆಸುವ ಬಯಕೆ ನನಗಿತ್ತು. ಇಂದಿನಿಂದಲೇ ಕ್ಷೇತ್ರ ಸಂಚಾರ ಆರಂಭಿಸಲಿದ್ದೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.