ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಶ್ರೀನಿವಾಸಪ್ರಸಾದ್

Published : Oct 17, 2016, 01:55 AM ISTUpdated : Apr 11, 2018, 01:11 PM IST
ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಶ್ರೀನಿವಾಸಪ್ರಸಾದ್

ಸಾರಾಂಶ

ಶ್ರೀನಿವಾಸ ಪ್ರಸಾದ್'ರನ್ನು ಸೆಳೆಯಲು ಬಿಜೆಪಿ ಮತ್ತು ಜೆಡಿಎಸ್​ನಲ್ಲಿ ಪೈಪೋಟಿ ನಡೆದಿದ್ದರೆ, ಪಕ್ಷದಲ್ಲೇ ಉಳಿಸಿಕೊಳ್ಳುವ ಯತ್ನ ಕಾಂಗ್ರೆಸ್'​ನಿಂದಲೂ ನಡೆದಿದೆ.

ಬೆಂಗಳೂರು(ಅ. 17): ಸಿಎಂ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ವಿಧಾನಸಭೆ ಸ್ಪೀಕರ್​ ಕೋಳಿವಾಡ ಅವರನ್ನು ಭೇಟಿ ಮಾಡಿದ ಶ್ರೀನಿವಾಸಪ್ರಸಾದ್​, ತಮ್ಮ ಶಾಸಕ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.

ಶ್ರೀನಿವಾಸ ಪ್ರಸಾದ್'ರನ್ನು ಸೆಳೆಯಲು ಬಿಜೆಪಿ ಮತ್ತು ಜೆಡಿಎಸ್​ನಲ್ಲಿ ಪೈಪೋಟಿ ನಡೆದಿದ್ದರೆ, ಪಕ್ಷದಲ್ಲೇ ಉಳಿಸಿಕೊಳ್ಳುವ ಯತ್ನ ಕಾಂಗ್ರೆಸ್'​ನಿಂದಲೂ ನಡೆದಿದೆ.  ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ, ಈಗಾಗಲೇ ಎರಡು ಬಾರಿ ಶ್ರೀನಿವಾಸ ಪ್ರಸಾದ್​ ಅವರನ್ನು ಸಂಪರ್ಕಿಸಿದ್ದು, ಪಕ್ಷಕ್ಕೆ ಕರೆತರುವ ಪ್ರಯತ್ನ ನಡೆಸಲಾಗಿದೆ ಎಂದಿದ್ದಾರೆ. ಇನ್ನು  ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​.ಡಿ. ಕುಮಾರಸ್ವಾಮಿ ಕೂಡಾ ಶ್ರಿನಿವಾಸ್​ ಪ್ರಸಾದ್'​ರನ್ನ  ಪಕ್ಷಕ್ಕೆ ಸೆಳೆಯುವ ಪ್ರಯತ್ನವನ್ನು ಖಚಿತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Tirupathi Laddu: ತಿರುಪತಿ ಲಡ್ಡು ಮಾರಾಟದಲ್ಲಿ ವಿಶ್ವದಾಖಲೆ: ಒಂದೇ ತಿಂಗಳಲ್ಲಿ 1.26 ಕೋಟಿ ಲಡ್ಡು ಸೇಲ್!
Honey Facts: 3000 ವರ್ಷವಾದರೂ ಜೇನುತುಪ್ಪ ಕೆಡುವುದಿಲ್ಲವೇ? ಇಲ್ಲಿದೆ ಅಚ್ಚರಿಯ ಸತ್ಯ!