
ಮಂಡ್ಯ(ಅ.19): ಮಂಡ್ಯ ಜಿಲ್ಲೆಯಲ್ಲಿ ಬೀದಿ ಕಾಮಣ್ಣರು ಇನ್ಮುಂದೆ ಬಾಲ ಬಿಚ್ಚಂಗಿಲ್ಲ. ಹೆಣ್ಣು ಮಕ್ಕಳನ್ನು ಚುಡಾಯಿಸಿದ್ರೆ ಜೈಲೇ ಗತಿ. ಕಾಮುಕರಿಗೆ ಪಾಠ ಕಲಿಸಲು ಮಂಡ್ಯದಲ್ಲಿ ಸಜ್ಜಾಗ್ತಿದೆ ಕಾವೇರಿ ವನಿತಾ ಪಡೆ. ಜಿಲ್ಲಾ ಪೊಲೀಸ್ ಇಲಾಖೆ ಮಹಿಳಾ ಪೊಲೀಸರಿಗೆ ವಿಶೇಷ ತರಬೇತಿ ನೀಡುತ್ತಿದೆ. ಮುಂದಿನ ನವಂಬರ್ ತಿಂಗಳಿನಲ್ಲಿ ಈ ಪಡೆ ಕಾರ್ಯಾರಂಭ ಮಾಡಲಿದೆ. ಜಿಲ್ಲೆಯ ಎಲ್ಲಾ ಸ್ಥಳೀಯ ವ್ಯಾಪ್ತಿಯಲ್ಲಿ ಈ ಪಡೆ ಕಾರ್ಯ ನಿರ್ವಹಿಸಲಿದೆ.
ಮಹಿಳೆಯರ ಮತ್ತು ಹೆಣ್ಣು ಮಕ್ಕಳ ಮೇಲಿನ ಹಲವು ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಲು ಕಾವೇರಿ ವನಿತಾ ಪಡೆ ಹುಟ್ಟು ಹಾಕಲಾಗಿದೆ. ತರಬೇತಿ ಪಡೆದ ತಂಡ ಬಸ್ ಸ್ಟಾಂಡ್, ಕಾಲೇಜ್ ಆವರಣ, ಹಾಗೂ ಮಹಿಳೆಯರು ಹೆಚ್ಚು ಸಂಚರಿಸುವ ಜಾಗದಲ್ಲಿ ಕಾರ್ಯ ನಿರ್ವಹಿಸಲಿದೆ.
ಒಟ್ಟಾರೆ ಕಾವೇರಿ ವನಿತಾ ಪಡೆಗೆ ಮಂಡ್ಯ ಜಿಲ್ಲೆಯಲ್ಲಿ ಸಖತ್ ರೆಸ್ಪಾನ್ಸ್ ಸಿಕ್ಕಿದೆ. ಸಾರ್ವಜನಿಕರ ವಲಯದಲ್ಲಿ ಎಷ್ಟರ ಮಟ್ಟಿಗೆ ಭರವಸೆ ಉಳಿಸಿಕೊಳ್ಳುತ್ತೆ ಅನ್ನೋದನ್ನ ಕಾದು ನೋಡಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.