
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಬಾಲ್ಯದಲ್ಲಿ ಚಹಾ ಮಾರಿದ ರೈಲು ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ, ಪ್ರವಾಸಿ ತಾಣವನ್ನಾಗಿ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಮೋದಿ ತಮ್ಮ ಬಾಲ್ಯದಲ್ಲಿ ವಡ್’ನಗರ್ ರೈಲ್ವೇ ನಿಲ್ದಾಣದಲ್ಲಿ ಟೀ ಮಾರುತ್ತಿದ್ದರು. ಆ ನಿಲ್ದಾಣವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಆದರೆ ಆ ಹಳೆಯ ಟೀ ಸ್ಟಾಲ್’ನ ಮೂಲರೂಪವನ್ನು ಅದೇ ರೀತಿ ಉಳಿಸಿಕೊಂಡು ಆಧುನಿಕ ಸ್ಪರ್ಶ ನೀಡಲಾಗುವುದೆಂದು ಕೇಂದ್ರ ಪ್ರವಾಸೋದ್ಯಮ ಇಲಾಖೆ ಸಚಿವ ಮಹೇಶ್ ಶರ್ಮಾ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಸುಮಾರು ರೂ. 100 ಕೋಟಿ ವೆಚ್ಚದಲ್ಲಿ ವಡ್’ಗರದ ಇತರ ಪ್ರವಾಸಿ ತಾಣಗಳನ್ನು ಮೇಲ್ದರ್ಜೆಗೇರಿಸಲಾಗುವುದೆಂದು ಹೇಳಲಾಗಿದೆ.
ರೈಲ್ವೇ ಇಲಾಖೆ ಸಹಯೋಗದೊಂದಿಗೆ ವಡ್’ನಗರ್ ರೈಲು ನಿಲ್ದಾಣವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಈಗಾಗಲೇ ಯೋಜನೆ ತಯಾರಾಗಿದೆ. ಎಂದು ಮಹೇಶ್ ಶರ್ಮಾ ಹೇಳಿದ್ದಾರೆ.
ಮೂರು ತಿಂಗಳುಗಳೊಳಗೆ ರೈಲು ನಿಲ್ದಾಣವನ್ನು ಮೇಲ್ದರ್ಜೆಗೇರಿಸಲಾಗುವುದು, ಟೀ ಸ್ಟಾಲಿನ ಮೂಲ ರೂಪವನ್ನು ಹಾಗೇನೇ ಉಳಿಸಿಕೊಳ್ಳಲಾಗುವುದು. ಪ್ರವಾಸಿಗರಿಗೆ ವಡ್’ನಗರದ ಸಾಂಸ್ಕೃತಿಕ ಮತ್ತು ಐತಿಹಾಸಿಕ ಮಹತ್ವವನ್ನು ತಿಳಿಸುವ ಸಲುವಾಗಿ ಕಲಾ ಗ್ಯಾಲರಿಯನ್ನು ಕೂಡಾ ಸ್ಥಾಪಿಸಲಾಗುವುದು ಎಂದು ಹೇಳಲಾಗಿದೆ..
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.