
ಬೆಂಗಳೂರು(ಜ.08):ವೈಕುಂಠದ ದ್ವಾರ ತೆರೆದಿರುವ ದಿನ ಎಂದೇ ಬಣ್ಣಿಸಲ್ಪಡುವ ವೈಕುಂಠ ಏಕಾದಶಿಗೆ ಸಿಲಿಕಾನ್ ಸಿಟಿಯ ದೇವಾಲಯಗಳು ಸಜ್ಜಾಗಿವೆ. ನಗರದ ಹಲವು ದೇವಾಲಯದಲ್ಲಿ ವೈಕುಂಠದ ದ್ವಾರಗಳನ್ನು ನಿರ್ಮಿಸಲಾಗಿದ್ದು, ಈ ದ್ವಾರಗಳ ಮೂಲಕ ದೇವರ ದರ್ಶನ ಪುಣ್ಯದಾಯಕ ಎಂಬ ನಂಬಿಕೆ ಇದೆ.
ನಗರದ ವೈಯ್ಯಾಲಿಕಾವಲಿನ ಟಿಟಿಡಿ, ಮಲ್ಲೇಶ್ವರಂ ಸೇರಿದಂತೆ ಹಲವು ದೇವಾಲಯಗಳಲ್ಲಿ ವೈಕುಂಠ ಏಕಾದಶಿಯ ವ್ರತಾಚರಣೆ ಆರಂಭವಾಗಿದ್ದು, ಬೆಳಿಗ್ಗೆ 5 ಗಂಟೆಯಿಂದಲೇ ವಿಶೇಷ ಪೂಜೆ ನಡೆಯುತ್ತಿದೆ. ವೇದ ಪಾರಾಯಣ, ವಿಷ್ಣು ಸಹಸ್ರನಾಮ ಪಾರಾಯಣ, ಹರಿಕಥೆಯೂ ನಡೆಯುತ್ತಿದೆ. ಅಲ್ಲದೆ ಭಕ್ತರು ವೈಕುಂಠ ದ್ವಾರದ ಮೂಲಕ ವಿಶೇಷವಾಗಿ ದೇವರ ದರ್ಶನ ಪಡೆಯಬಹುದಾಗಿದೆ. ವೈಕುಂಠ ಏಕಾದಶಿಯಂದು ಉಪವಾಸವಿದ್ದು, ವಿಷ್ಣು, ಶ್ರೀನಿವಾಸ ಅಥವಾ ವೆಂಕಟರಮಣ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರೆ ಹಿಂದಿನ ಘೋರ ಪಾಪಗಳು ನೀಗಿ ಮುಕ್ತಿ ದೊರೆಯುತ್ತದೆ ಎಂಬ ಪ್ರತೀತಿ ಹಿಂದು ಭಕ್ತರಲ್ಲಿದೆ. ಹೀಗಾಗಿ ಇಂದು ಭಕ್ತರು ದೇವಾಲಯಗಳಿಗೆ ತೆರಳಿ ದೇವರ ದರ್ಶನ ಪಡೆಯುತ್ತಿದ್ದು, ನಗರದ ಎಲ್ಲೆಡೆ ಹರಿಸ್ಮರಣೆ ಮೊಳಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.