ನಕ್ಸಲ್ ಹತ್ಯಾಕಾಂಡ ಪ್ರಕರಣ : ವರವರ ರಾವ್ ನ್ಯಾಯಾಲಯಕ್ಕೆ ಹಾಜರು

Published : Jul 04, 2019, 03:34 PM ISTUpdated : Jul 04, 2019, 03:39 PM IST
ನಕ್ಸಲ್ ಹತ್ಯಾಕಾಂಡ ಪ್ರಕರಣ : ವರವರ ರಾವ್ ನ್ಯಾಯಾಲಯಕ್ಕೆ ಹಾಜರು

ಸಾರಾಂಶ

14 ವರ್ಷಗಳ ಹಿಂದೆ ತುಮಕೂರಿನ ಪಾವಗಡದಲ್ಲಿ ನಡೆದ ಪೊಲೀಸರ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಂತಕ,ಲೇಖಕ ವರವರ ರಾವ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. 

ತುಮಕೂರು [ಜು.04] :  ತೆಲುಗಿನ ಕ್ರಾಂತಿಕಾರಿ ಕವಿ ವರವರ ರಾವ್‌ ಅವರನ್ನು ಕರ್ನಾಟಕದ ಪಾವಗಡ ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 

ನಕ್ಸಲ್‌ ಹತ್ಯಾಕಾಂಡ ಪ್ರಕರಣ ಸಂಬಂಧ ಮಹಾರಾಷ್ಟ್ರದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ವರವರ ರಾವ್ ಅವರನ್ನು ಹೈ ಕೋರ್ಟ್ ಆದೇಶದ ಮೇರೆಗೆ ಪೂನಾದಿಂದ ಕರೆತಂದು, ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ತುಮಕೂರು ಜಿಲ್ಲೆ ಪಾವಗಡದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. 

2005 ರ ಫೆ.5 ರಂದು ಪಾವಗಡದ ವೆಂಕಟಮ್ಮನಹಳ್ಳಿಯಲ್ಲಿ ನಕ್ಸಲ್ ಹತ್ಯಾಕಾಂಡ ನಡೆದಿದ್ದು, ಈ ಘಟನೆಯಲ್ಲಿ  ಓರ್ವ ನಾಗರಿಕ ಸೇರಿ 7 ಮಂದಿ ಪೊಲೀಸರು ಹತ್ಯೆಯಾಗಿದ್ದರು. ವರವರ ರಾವ್ ಪೊಲೀಸರ ಹತ್ಯಾಕಾಂಡದಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ್ದವರಿಗೆ ಸಹಕರಿಸಿದ್ದ ಆರೋಪ ಎದುರಿಸುತ್ತಿದ್ದರು. 

ಪಾವಗಡ ನಕ್ಸಲ್‌ ಅಟ್ಟಹಾಸ : ಚಿಂತಕ ವರವರರಾವ್‌ ವಶಕ್ಕೆ

 ಸದ್ಯ ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ಆರೋಪದಡಿ ಅವರನ್ನು ಮಹಾರಾಷ್ಟ್ರದಲ್ಲಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು