ಕಾಂಗ್ರೆಸ್ ಶಾಸಕರಿಗೆ ಖಡಕ್ ವಾರ್ನಿಂಗ್

By Web DeskFirst Published Sep 24, 2018, 8:27 AM IST
Highlights

ಪಕ್ಷವನ್ನು ದುರ್ಬಳಕೆ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಅಥವಾ ಒತ್ತಡ ತಂತ್ರ ಅನುಸರಿಸಲು ಮುಂದಾದರೆ ಪಕ್ಷ ಸಹಿಸುವುದಿಲ್ಲ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ. 
 

ಬೆಂಗಳೂರು : ಬಿಜೆಪಿ ನಾಯಕರು ಎಷ್ಟು ಪ್ರಯತ್ನಿಸಿದರೂ ಕಾಂಗ್ರೆಸ್ ಶಾಸಕರು ಪಕ್ಷ ಬಿಡುವು ದಿಲ್ಲ ಎಂಬ ಸಂಪೂರ್ಣ ವಿಶ್ವಾಸವಿದೆ. ಆದರೆ, ಒಂದಿಬ್ಬರು ಪಕ್ಷವನ್ನು ದುರ್ಬಳಕೆ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಅಥವಾ ಒತ್ತಡ ತಂತ್ರ ಅನುಸರಿಸಲು ಮುಂದಾದರೆ ಪಕ್ಷ ಸಹಿಸುವುದಿಲ್ಲ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ. 

ಈ ನಡುವೆ  ಸಚಿವ ಸ್ಥಾನಕ್ಕೆ ಆಗ್ರಹಿಸುತ್ತಿರುವ ಶಾಸಕ  ಎಂಟಿಬಿ ನಾಗರಾಜ್, ಸುಧಾಕರ್ ಜತೆಗೂ ಮಾತುಕತೆ ನಡೆಸಿ ಬಂಡಾಯ ಶಮನ ಮಾಡುವ ಯತ್ನ ಮಾಡಿದರು.  ಬಿಜೆಪಿ ನಾಯಕರು ಎಷ್ಟೇ ಪ್ರಯತ್ನ ನಡೆಸಿದರೂ ಕಾಂಗ್ರೆಸ್ ಶಾಸಕರು ಪಕ್ಷ ಬಿಡುವುದಿಲ್ಲ ಎಂಬ ಸಂಪೂರ್ಣ  ವಿಶ್ವಾಸವಿದೆ.

ಆದರೆ, ಒಂದಿಬ್ಬರು ಪಕ್ಷವನ್ನು ದುರ್ಬಳಕೆ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಅಥವಾ ಒತ್ತಡ ತಂತ್ರ ಅನುಸರಿಸಲು ಮುಂದಾದರೆ ಪಕ್ಷ ಸಹಿಸುವುದಿಲ್ಲ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ನಡೆದ ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಹಾಗೂ ಮುಂಚೂಣಿ ಘಟಕಗಳ ಅಧ್ಯಕ್ಷರ ಸಭೆ ಬಳಿಕ ಸುದ್ದಿಗಾರರೊಂದಿಗೆ ಅವರು ಬ್ಲ್ಯಾಕ್ ಮೇಲ್ ತಂತ್ರ ನಡೆಸುತ್ತಿರುವ ಶಾಸಕರಿಗೆ ಚಾಟಿ ಬೀಸಿದರು.

ಕಾಂಗ್ರೆಸ್ ಶಾಸಕರ ಬಗ್ಗೆ ನಮಗೆ ಸಂಪೂರ್ಣ ವಿಶ್ವಾಸವಿದೆ. ಆದರೆ, ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ನಡೆಸುತ್ತಿರುವ ಪ್ರಯತ್ನಗಳ ಬಗ್ಗೆಯೂ ಮಾತನಾಡಬೇಕು. ಬಿ.ಎಸ್. ಯಡಿಯೂರಪ್ಪ ಅವರೇ ಸ್ವತಃ ಕರೆ ಮಾಡಿ ಶಾಸಕರಿಗೆ ಅಧಿಕಾರ ಹಾಗೂ ಹಣದ ಆಮಿಷ ಒಡ್ಡಿದ್ದಾರೆ. ಬಿಜೆಪಿಯ ಇಂತಹ ಕೆಟ್ಟ ರಾಜಕಾರಣವನ್ನು ಸಹಿಸಲಾಗುವುದಿಲ್ಲ. ನಿಮಗೆ ಕುದುರೆ ವ್ಯಾಪಾರಕ್ಕೆ ಹಣ ಎಲ್ಲಿಂದ ಬರುತ್ತಿದೆ ಎಂಬುದನ್ನು ಬಹಿರಂಗಪಡಿಸಿ ಎಂದು ಸವಾಲು ಹಾಕಿದರು. 

ನಮ್ಮ ಶಾಸಕರ ಬಗ್ಗೆ ಸಂಪೂರ್ಣ ವಿಶ್ವಾಸವಿದೆ. ಜತೆಗೆ ಇಂತಹ ಸನ್ನಿವೇಶಗಳನ್ನು ನಿಭಾಯಿಸುವ ಶಕ್ತಿ ನಮ್ಮ ಪಕ್ಷಕ್ಕಿದೆ. ಬಹುಮತ ಸಾಬೀತು ವೇಳೆ ಬಿಜೆಪಿಯವರು ಇದಕ್ಕಿಂತ ಹೆಚ್ಚು ಒತ್ತಡ, ಹಣ ಹಾಗೂ ತೋಳ್ಬಲದ ಮೂಲಕ ಶಾಸಕರನ್ನು ಸೆಳೆಯಲು ಯತ್ನಿಸಿದರು. ಆದರೆ, ನಾವು ಬಹುಮತ ಸಾಬೀತುಪಡಿಸಿ ಯಶಸ್ವಿಯಾಗಿ ಅಧಿಕಾರ ನಡೆಸುತ್ತಿದ್ದೇವೆ. ಆದರೂ, ನಮ್ಮ ಶಾಸಕರ ನಡೆಗಳ ಬಗ್ಗೆ ನಮಗೆ ಗಮನ ಇರುತ್ತದೆ. ಕೆಲ ಶಾಸಕರು ಚೆನ್ನೈಗೆ ಪ್ರಯಾಣಿಸಿದ್ದು ಸೇರಿದಂತೆ ಪ್ರತಿಯೊಂದನ್ನೂ ಪರಿಶೀಲಿ ಸುತ್ತೇವೆ. ಶಾಸಕರ ಮೇಲಿನ ಆರೋಪಗಳಲ್ಲಿ ಸತ್ಯ ಹಾಗೂ ಪಕ್ಷ ವಿರೋಧಿ ನಡೆ ಇದೆ ಎನಿಸಿದರೆ ಕ್ರಮ ಕೈಗೊಳ್ಳುತ್ತೇವೆ. ಪಕ್ಷದಲ್ಲಿದ್ದು ಪಕ್ಷದ ಶಿಸ್ತು ಉಲ್ಲಂಘಿಸುವುದು ಅಥವಾ ಪಕ್ಷವನ್ನು ಬ್ಲ್ಯಾಕ್ ಮೇಲ್ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದರು. 

ಬಿಜೆಪಿ ವಿರುದ್ಧ ಹೋರಾಟ: ಕೇಂದ್ರ ಸರ್ಕಾರವು ರಫೇಲ್ ಅಕ್ರಮ ಸೇರಿದಂತೆ ಕಳೆದ ನಾಲ್ಕು ವರ್ಷದಲ್ಲಿ ಕೆಟ್ಟ ಆಡಳಿತ  ನೀಡಿದೆ. ಈ ಬಗ್ಗೆ ರಾಜ್ಯಾದ್ಯಂತ ಹೋರಾಟ ರೂಪಿಸುತ್ತಿದ್ದು, ಅ. 6 ರಂದು ಬೆಂಗಳೂರಿನಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು. ಯುಪಿಎ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಕಲ್ಲಿದ್ದಲು, 2 -ಜಿ, ಕಾಮನ್‌ವೆಲ್ತ್ ಸೇರಿದಂತೆ ಹಲವು ಅಕ್ರಮಗಳ ಬಗ್ಗೆ ಬಿಜೆಪಿ ಆರೋಪ ಮಾಡಿತ್ತು. ಆದರೆ, ಅಧಿಕಾರಕ್ಕೆ ಬಂದು ನಾಲ್ಕೂವರೆ ವರ್ಷವಾದರೂ ಈ ಆರೋಪಗಳ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಇವು ಕೇವಲ ಆರೋಪಗಳು ಮಾತ್ರ ಎಂಬುದು ಸಾಬೀತಾಗಿದೆ. 

click me!