
ಬೆಂಗಳೂರು: ರಾಜ್ಯದಲ್ಲಿ ಕೆಲವರು ಪರಿವರ್ತನಾ ರ್ಯಾಲಿ ಮಾಡಲು ಹೊರಟಿದ್ದಾರೆ.ಇನ್ನೂ ಕೆಲವರು ಕುಮಾರಪರ್ವ ಮಾಡಲು ಹೊರಟಿದ್ದಾರೆ. ಆದರೆ ನಮ್ಮದು ಸಾಧನಾ ಪರ್ವ. ಏಕೆಂದರೆ ನಾವು ನುಡಿದಂತೆ ನಡೆದಿದ್ದೇವೆ. ಜನರು ನಮಗೇ ಮತ್ತೆ ಆಶೀರ್ವಾದ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನಸೌಧದ ಎದುರು ಸೋಮವಾರ ನಡೆದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪರಿವರ್ತನಾ ರ್ಯಾಲಿ ನಡೆಸುತ್ತಿರುವವರು ಮೊದಲು ಕೋಮುವಾದದಿಂದ ಜಾತ್ಯತೀತ ವಾದಕ್ಕೆ ಪರಿವರ್ತನೆ ಆಗಬೇಕು. ಇಲ್ಲದಿದ್ದರೆ ಅದರಿಂದ ಯಾರಿಗೂ ಪ್ರಯೋಜನ ಆಗುವುದಿಲ್ಲ ಎಂದರು.
ನಾವು ನುಡಿದಂತೆ ನಡೆದಿದ್ದೇವೆ. ಅದನ್ನು ಸಹಿಸಿಕೊಳ್ಳಲು ಆಗದವರು ರ್ಯಾಲಿ ಹೊರಟು ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ಯಾರೇ ಪರಿವರ್ತನಾ ರ್ಯಾಲಿ ಮಾಡಿದರೂ, ಯಾರೇ ಕುಮಾರ ಪರ್ವ ಮಾಡಿದರೂ ನಮ್ಮದು ಸಾಧನೆಯ ಪರ್ವ. ಈಗಾಗಲೇ ರಾಜ್ಯದ ಜನರು ತೀರ್ಮಾನ ಮಾಡಿದ್ದಾರೆ. ನಮ್ಮ ಕಾರ್ಯಕ್ರಮಗಳನ್ನು ಮೆಚ್ಚಿದ್ದಾರೆ. ಮತ್ತೆ ನಮಗೇ ಆಶೀರ್ವಾದ ಮಾಡುತ್ತಾರೆ ಎಂದು ಹೇಳಿದರು.
ರಾಜ್ಯ ಸರ್ಕಾರ ಕನಕದಾಸರ ಕೃತಿ ಗಳನ್ನು ಮರು ಮುದ್ರಣ ಮಾಡಲು ನಿರ್ಧರಿಸಿದೆ. ಈ ಹಿಂದೆ 1988ರಲ್ಲಿ ಕನಕದಾಸರ ಅನೇಕ ಕೃತಿಗಳನ್ನು ಜನಸಾಮಾನ್ಯರಿಗೆ ಕೈಗೆಟಕುವಂತೆ ಮಾಡಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.