ಈ ಸುಂದರಿಯ ಸಾವು ಎಷ್ಟು ನಿಗೂಢ!

Sep 20, 2018, 5:40 PM IST

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ‘ಮಂತ್ರಿ ಆಲ್‌ಫೈನ್’ ಅಪಾರ್ಟ್‌ಮೆಂಟ್‌ನ ಐದನೇ ಮಹಡಿಯಿಂದ ಬಿದ್ದು ಸೋನಾಲ್ (25) ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಪತಿ ಅವಿನಾಶ್ ಕೊಲೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಮತ್ತೊಂದೆಡೆ ಸೋನಾಲ್ ಕಳ್ಳತನ ಮಾಡುವ ಉದ್ದೇಶದಿಂದ ತಮ್ಮ ಫ್ಲ್ಯಾಟ್‌ಗೆ ಬಂದಿದ್ದರು ಎಂದು ಆರೋಪಿಸಿ ಸೋನಾಲ್ ಸ್ನೇಹಿತೆಯ ಪತಿ ಪ್ರಸಾದ್ ದೂರು ನೀಡಿದ್ದಾರೆ. ಎರಡು ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಭಾನುವಾರ ರಾತ್ರಿ ಸೋನಾಲ್ ಅವರು ಪ್ರಸಾಧ್ ಅವರಿಗೆ ಸೇರಿದ ಫ್ಲಾಟ್ 501 ನಂಬರಿನ ಫ್ಲಾಟ್‌ನ ಬಾಲ್ಕನಿಯಿಂದ ಬಿದ್ದು ಮೃತಪಟ್ಟಿದ್ದರು. ಅಲ್ಲದೆ, ಸೋನಾಲ್ ಅವರ ಒಳ ಉಡುಪಿನಲ್ಲಿ ಪ್ರಸಾದ್ ಅವರ ಮನೆಯ ಬೀರುವಿನ ಕೀ ಮತ್ತು ಪ್ರಸಾದ್ ಪತ್ನಿಗೆ ಸೇರಿದ ಆಭರಣಗಳು ಪತ್ತೆಯಾಗಿದ್ದವು. ಇದು ಪೊಲೀಸರಿಗೆ ಅನುಮಾನ ಬರುವಂತೆ ಮಾಡಿದೆ.