ಸಿಎಂ ಜತೆ ಸಭೆ ಅಪೂರ್ಣ; ವಿಧಾನ ಪರಿಷತ್ ಸದಸ್ಯರ ಅಹೋರಾತ್ರಿ ಧರಣಿ ತಾತ್ಕಾಲಿಕ ಅಂತ್ಯ

By Suvarna Web DeskFirst Published Sep 15, 2017, 10:30 PM IST
Highlights

ರಾಜ್ಯದ ಸಮಗ್ರ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಕಳೆದ 8 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದ ಸರ್ವ ಪಕ್ಷಗಳ ವಿಧಾನ ಪರಿಷತ್ ಸದಸ್ಯರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಸುದೀರ್ಘ ಸಭೆ ನಡೆಸಿದರಾದರೂ ಚರ್ಚೆ ಅಪೂರ್ಣಗೊಂಡಿದ್ದು, ಸೆ.19 ರಂದು ಸಭೆ ಮುಂದುವರಿಯಲಿದೆ. ಈ ಹಿನ್ನೆಲೆಯಲ್ಲಿ ಕಳೆದ ಒಂಭತ್ತು ದಿನಗಳಿಂದ ನಡೆಸಿದ್ದ ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆಯಲು ಶಾಸಕರು ನಿರ್ಧರಿಸಿದ್ದಾರೆ.

ಬೆಂಗಳೂರು (ಸೆ.15): ರಾಜ್ಯದ ಸಮಗ್ರ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಕಳೆದ 8 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದ ಸರ್ವ ಪಕ್ಷಗಳ ವಿಧಾನ ಪರಿಷತ್ ಸದಸ್ಯರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಸುದೀರ್ಘ ಸಭೆ ನಡೆಸಿದರಾದರೂ ಚರ್ಚೆ ಅಪೂರ್ಣಗೊಂಡಿದ್ದು, ಸೆ.19 ರಂದು ಸಭೆ ಮುಂದುವರಿಯಲಿದೆ. ಈ ಹಿನ್ನೆಲೆಯಲ್ಲಿ ಕಳೆದ ಒಂಭತ್ತು ದಿನಗಳಿಂದ ನಡೆಸಿದ್ದ ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆಯಲು ಶಾಸಕರು ನಿರ್ಧರಿಸಿದ್ದಾರೆ.


ಸುಮಾರು ಮೂರು ಗಂಟೆಗಳ ಕಾಲ ನಡೆದ ಚರ್ಚೆಯಲ್ಲಿ ಸಿಎಂ ಜತೆ ಪ್ರಾಥಮಿಕ ಶಿಕ್ಷಣ ಸಚಿವ ತನ್ವೀರ್ ಸೇಠ್ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಸೇರಿದಂತೆ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದಿಂದ ಪರಿಷತ್‌ಗೆ ಆಯ್ಕೆಯಾದ ಎಲ್ಲ ಸದಸ್ಯರು ಮತ್ತು ಉಭಯ ಇಲಾಖೆಗಳ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಉನ್ನತ ಮತ್ತು ತಾಂತ್ರಿಕ ಶಿಕ್ಷಣದವರೆಗೆ ಅನೇಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಒಟ್ಟು 16 ಬೇಡಿಕೆಗಳ ಪೈಕಿ ಸಭೆಯಲ್ಲಿ ಕೇವಲ 19 ವರ್ಷಗಳನ್ನು ಚರ್ಚಿಸಲು ಸಾಧ್ಯವಾಯಿತು. ಉಳಿದ 27 ವಿಷಯಗಳ ಕುರಿತು ಸೆ.29 ರಂದು ಚರ್ಚೆ ಮುಂದುವರಿಸಲು ತೀರ್ಮಾನಿಸಲಾಯಿತು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಅಹೋರಾತ್ರಿ ಧರಣಿ ವಾಪಸ್ ಪಡೆಯುವಂತೆ ಶಾಸಕರನ್ನು ಮನವಿ ಮಾಡಿದರು. ಆದರೆ ತಮ್ಮ ನಿರ್ಧಾರ ನಂತರ ತಿಳಿಸುವುದಾಗಿ ಶಾಸಕರು ಹೇಳುವ ಮೂಲಕ ಸಭೆ ಕೊನೆಗೊಂಡಿತು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಬಳಿಕ ವಿಧಾನಸೌಧಕ್ಕೆ ತೆರಳಿ ಪರಿಷತ್ ಸದಸ್ಯರು ಮತ್ತೆ ಸಭೆ ನಡೆಸಿದರು. ಈಗಾಗಲೇ ಚರ್ಚೆಯಾದ 19 ವಿಷಯಗಳಿಗೆ ಸಿಎಂ ಸಿದ್ದರಾಮಯ್ಯ ಸಕಾರಾತ್ಮಕ ಪ್ರತಿಕ್ರಿಯೆ ತೋರಿದ್ದು, ಕೆಲ ಸಣ್ಣ-ಪುಟ್ಟ ಬದಲಾವಣೆಗಳೊಂದಿಗೆ ಒಪ್ಪಿಗೆ ನೀಡುವ ಭರವಸೆ ನೀಡಿದ್ದಾರೆ. ಹೀಗಾಗಿ ಸೆ. 19 ರ ಸಭೆಯಲ್ಲಿ ಎಲ್ಲ ವಿಚಾರಗಳನ್ನು ಚರ್ಚಿಸೋಣ. ಒಂದು ವೇಳೆ ಬೇಡಿಕೆ ಈಡೇರದಿದ್ದರೆ ಸೆ.20 ರಿಂದ ಮತ್ತೆ ಧರಣಿ ಮುಂದುವರಿಸೋಣ ಎಂದು ತೀರ್ಮಾನಿಸಿದರು.

click me!