11 ಪರಿಷತ್ ಸದಸ್ಯರ ಅವಿರೋಧ ಆಯ್ಕೆ ಖಚಿತ

Published : May 31, 2018, 07:54 AM IST
11  ಪರಿಷತ್ ಸದಸ್ಯರ ಅವಿರೋಧ ಆಯ್ಕೆ  ಖಚಿತ

ಸಾರಾಂಶ

ವಿಧಾನಸಭೆಯಿಂದ ವಿಧಾನಪರಿಷತ್ತಿನ 11 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆ ನಡೆಯದೆ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ  ಖಚಿತವಾಗಿದ್ದು, ಬಿಜೆಪಿ ಐದು, ಕಾಂಗ್ರೆಸ್ ನಾಲ್ಕು ಮತ್ತು ಜೆಡಿಎಸ್ ಇಬ್ಬರನ್ನು ಕಣಕ್ಕಿಳಿಸಲು ಮುಂದಾಗಿವೆ. ನಾಮಪತ್ರ ಸಲ್ಲಿಸಲು ಗುರುವಾರ ಅಂತಿಮ ದಿನವಾಗಿದ್ದು,  ನಾಮಪತ್ರಗಳ ಪರಿಶೀಲನೆ ಜೂ.೧ರಂದು ನಡೆಯಲಿದೆ.

ಬೆಂಗಳೂರು (ಮೇ. 31): ವಿಧಾನಸಭೆಯಿಂದ ವಿಧಾನಪರಿಷತ್ತಿನ 11 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆ ನಡೆಯದೆ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ  ಖಚಿತವಾಗಿದ್ದು, ಬಿಜೆಪಿ ಐದು, ಕಾಂಗ್ರೆಸ್ ನಾಲ್ಕು ಮತ್ತು ಜೆಡಿಎಸ್ ಇಬ್ಬರನ್ನು ಕಣಕ್ಕಿಳಿಸಲು ಮುಂದಾಗಿವೆ.

ನಾಮಪತ್ರ ಸಲ್ಲಿಸಲು ಗುರುವಾರ ಅಂತಿಮ ದಿನವಾಗಿದ್ದು,  ನಾಮಪತ್ರಗಳ ಪರಿಶೀಲನೆ ಜೂ.1 ರಂದು ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಜೂ.೪ ಕೊನೆಯ ದಿನವಾಗಿದೆ. ಒಂದು ವೇಳೆ ೧೧ ಕ್ಷೇತ್ರಗಳಿಗೆ ೧೧ ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದಲ್ಲಿ ಪರಿಶೀಲನೆ ಬಳಿಕ ಫಲಿತಾಂಶ ಹೊರ ಬೀಳುವ ಸಾಧ್ಯತೆಯಿದೆ. 11 ಕ್ಕಿಂತ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿ ಉಳಿದಲ್ಲಿ ಮಾತ್ರ ಜೂ.11 ಕ್ಕೆ ಚುನಾವಣೆ ನಡೆಯಲಿದೆ.

ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಬುಧವಾರ ಸಂಜೆಯೇ ತಮ್ಮ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಗೊಳಿಸಿದ್ದು, ಜೆಡಿಎಸ್ ಗುರುವಾರ ಬೆಳಗ್ಗೆ ಅಂತಿಮಗೊಳಿಸಲಿದೆ. ಮೂರೂ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಅಂತಿಮ ದಿನವಾದ ಗುರುವಾರವೇ ನಾಮಪತ್ರ ಸಲ್ಲಿಸುತ್ತಿದ್ದಾರೆ. 

ಬಿಜೆಪಿ
 ರುದ್ರೇಗೌಡ
 ತೇಜಸ್ವಿನಿ ಗೌಡ
 ಕೆ.ಪಿ.ನಂಜುಂಡಿ
 ರಘುನಾಥ
ಮಲ್ಕಾಪುರೆ
 ರವಿಕುಮಾರ್

ಕಾಂಗ್ರೆಸ್

 ಕೆ.ಗೋವಿಂದ ರಾಜ್
 ಸಿ.ಎಂ.ಇಬ್ರಾಹಿಂ
 ಅರವಿಂದ ಅರಳಿ
 ಕೆ.ಹರೀಶ್ ಕುಮಾರ್

ಜೆಡಿಎಸ್
 ಬಿ.ಎಂ.ಫಾರೂಕ್
 ಡಾ|ಎಸ್.ಸುಬ್ರಮಣ್ಯ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಸಕರಿಗೆ ಡಿ.ಕೆ.ಶಿವಕುಮಾರ್‌ ಔತಣಕೂಟ; 25ಕ್ಕೂ ಹೆಚ್ಚು ಶಾಸಕರು ಭಾಗಿ
ಸುತ್ತೋಲೆ ವಿವಾದಕ್ಕೆ ತೆರೆ.. ಹಾಲಿ ಪಿಯುಸಿ ಉಪನ್ಯಾಸಕರಿಗೆ ಇಲ್ಲ ಹಿಂಬಡ್ತಿ: ಸಚಿವ ಮಧು ಬಂಗಾರಪ್ಪ