
ಬೆಂಗಳೂರು (ಜೂ. 21): ಸದಾ ಸಮಾಜ ಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವ ರಾಗಿಗುಡ್ಡ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ಚಾರಿಟೇಬಲ್ ಟ್ರಸ್ಟ್’ನವರು ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡಲು ವಿದ್ಯಾನಿಧಿ ಎನ್ನುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಜೂ. 23 ರಂದು ಬೆಳಿಗ್ಗೆ 10.30 ಕ್ಕೆ ರಾಗಿಗುಡ್ಡದಲ್ಲಿರುವ ಕುಚಲಾಂಬ ಸಾಂಸ್ಕೃತಿಕ ಮಂದಿರದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಸೂರ್ಯ ಸಾಫ್ಟ್’ವೇರ್ ಸಿಸ್ಟಂ’ನ ಚೇರ್’ಮನ್ ಹಾಗೂ ಫೌಂಡರ್ ಡಿ ಎನ್ ಪ್ರಹ್ಲಾದ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಆರ್ ಎಸ್ ಪಿಎಎಸ್ ಟ್ರಸ್ಟ್ ಅಧ್ಯಕ್ಷರಾಗಿರುವ ಕೆ ಪಿ ರಾವ್ ಹಾಗೂ ವಾಸುದೇವ್ ತಂತ್ರಿ ಉಪಸ್ಥಿತರಿರಲಿದ್ದಾರೆ.
ರಾಗಿಗುಡ್ಡ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ಚಾರಿಟೇಬಲ್ ಟ್ರಸ್ಟ್ 1975 ರಲ್ಲಿ ಹುಟ್ಟಿಕೊಂಡ ಸಂಸ್ಥೆ. ಸಾಕಷ್ಟು ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾ ಬಂದಿದೆ.
ವಿದ್ಯಾನಿಧಿ, ಹೆಲ್ತ್’ಕೇರ್, ಆರೋಗ್ಯ ನಿಧಿ ಸೇರಿದಂತೆ ಸಾಕಷ್ಟು ಒಳ್ಳೆಯ ಕೆಲಸ ಮಾಡುವ ಮೂಲಕ ಮಕ್ಕಳಿಗೆ ನೆರವು ನೀಡುತ್ತಿದೆ.
ಜೂ. 23 ರಂದು ನಡೆಯುವ ವಿದ್ಯಾನಿಧಿ ಕಾರ್ಯಕ್ರಮಕ್ಕೆ ನೀವೂ ಬನ್ನಿ. ಭಾಗವಹಿಸಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.