ಮಲ್ಯ ಮೇಲ್ಮನವಿ ಅರ್ಜಿ ತಿರಸ್ಕೃತ: ಭಾರತಕ್ಕೆ ಗಡಿಪಾರು ಶೀಘ್ರ?

By Web DeskFirst Published Apr 8, 2019, 7:16 PM IST
Highlights

ಭಾರತಕ್ಕೆ ಬರದಿರಲು ಸಾಧ್ಯವಿರುವುದನ್ನೆಲ್ಲಾ ಮಾಡಿದ ಮಲ್ಯ| ಗಡಿಪಾರು ಪ್ರಶ್ನಿಸಿ ಮಲ್ಯ ಸಲ್ಲಿಸಿದ್ದ ಅರ್ಜಿ ವಜಾ| ಮಲ್ಯ ಭಾರತಕ್ಕೆ ಗಡಿಪಾರು ಶೀಘ್ರ ಸಾಧ್ಯತೆ| ಮಲ್ಯ ಅರ್ಜಿ ತಿರಸ್ಕರಿಸಿದ ಲಂಡನ್ ಹೈಕೋರ್ಟ್| 

ಲಂಡನ್(ಏ.08): ಭಾರತೀಯ ಬ್ಯಾಂಕ್ ಗಳಿಗೆ ಸುಮಾರು 9 ಸಾವಿರ ಕೋಟಿ ರೂ. ವಂಚಿಸಿ, ಬ್ರಿಟನ್ಗೆ ಪಲಾಯನ ಗೈದಿರುವ ಉದ್ಯಮಿ ವಿಜಯ್ ಮಲ್ಯ ಶೀಘ್ರದಲ್ಲೇ ಗಡಿಪಾರಾಗುವ ಸಾಧ್ಯತೆ ದಟ್ಟವಾಗಿದೆ.

ತಮ್ಮ ಗಡಿಪಾರು ಆದೇಶದ ವಿರುದ್ಧ ಮಲ್ಯ ಸಲ್ಲಿಸಿದ್ದ ಮೇಲ್ಮನವಿಯನ್ನು ಲಂಡನ್ ಹೈಕೋರ್ಟ್ ವಜಾಗೊಳಿಸಿದೆ.

ಕಳೆದ ವರ್ಷ ಡಿಸೆಂಬರ್ ನಲ್ಲಿ ವಿಜಯ್ ಮಲ್ಯ ಗಡಿಪಾರು ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ್ದ ಲಂಡನ್ ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್, ಹಣಕಾಸಿನ ವಿಚಾರದಲ್ಲಿ ಹಾಗೂ ವಂಚನೆಗೆ ಸಂಬಂಧಪಟ್ಟಂತೆ ಮಲ್ಯ ವಿರುದ್ಧದ ಆರೋಪಗಳಿಗೆ ಸಾಕ್ಷ್ಯಗಳಿವೆ ಎಂದು ಹೇಳಿತ್ತು.

ಅಲ್ಲದೇ ಮಲ್ಯ ಅವರನ್ನು ಶೀಘ್ರದಲ್ಲೇ ಗಡಿಪಾರು ಮಾಡಬೇಕೆಂದು ಆದೇಶ ನೀಡಿತ್ತು. ಆದರೆ ಈ ತೀರ್ಪಿನ ಕುರಿತು ಮಲ್ಯ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. 

ಇದೀಗ ಹೈಕೋರ್ಟ್ ನಲ್ಲೂ ಮದ್ಯದ ದೊರೆಗೆ ಹಿನ್ನಡೆಯಾಗಿದ್ದು, ಶೀಘ್ರದಲ್ಲೇ ಭಾರತಕ್ಕೆ ಗಡಿಪಾರು ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
 

click me!