
ಬೆಳಗಾವಿ[ಸೆ.30]: ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಕುರಿತು ಆಡಿಯೋ ಬಹಳ ಹಳೆಯದು. ಅದನ್ನು ಈಗ ವೈರಲ್ ಮಾಡಿದ್ದಾರೆ. ನಮ್ಮ ಪರವಾಗಿ ಸತೀಶ್ ಜಾರಕಿಹೊಳಿ ಅವರು ಬ್ಯಾಟಿಂಗ್ ಮಾಡಿದ್ರೂ ಅವರಿಗೆ ಸ್ವಾಗತ. ವಿರೋಧ ಮಾಡಿದವರಿಗೂ ಸ್ವಾಗತ ಮಾಡುತ್ತೇನೆ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದರು.
ಭಾನುವಾರ ನಗರದಲ್ಲಿ ಮಾತನಾಡಿದ ಅವರು, ನೆರೆ ಪರಿಹಾರಕ್ಕೆ ಕೊಡಲು ಹಣದ ಕೊರತೆ ನಮ್ಮ ಸರ್ಕಾರಕ್ಕೆ ಇಲ್ಲ. ಈಗಾಗಲೇ ಬೆಳಗಾವಿ ಜಿಲ್ಲೆಗೆ .500 ಕೋಟಿ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರ ಆ ನಂತರ ಹಣ ಕಳುಹಿಸಿಕೊಡುತ್ತೆ. ಸದ್ಯ ನಮ್ಮಲ್ಲಿ ಇರುವ ಹಣದಲ್ಲಿ ಕೆಲಸ ಆರಂಭಿಸಿದ್ದೇವೆ ಎಂದರು.
ಒಂದೇ ವಿಮಾನದಲ್ಲಿ ಪ್ರಯಾಣ:
ಡಿಸಿಎಂ ಲಕ್ಷ್ಮಣ ಸವದಿ, ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಜಾರಕಿಹೊಳಿ ಅಳಿಯ ಅಂಬಿರಾವ್ ಅವರು ಒಂದೇ ವಿಮಾನದಲ್ಲಿ ಭಾನುವಾರ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಈ ವೇಳೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಲು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ನಿರಾಕರಿಸಿದರು. ಅಳಿಯ ಅಂಬಿರಾವ್ ಪಾಟೀಲ್ ಕೂಡ ಜೊತೆಗೆ ಪ್ರಯಾಣಿಸಿರುವುದು ಗಮನ ಸೆಳೆಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.