ವೈರಲ್‌ ಚೆಕ್‌: ಬಿಹಾರ ಸರ್ಕಾರ ಒಂದೇ ವಾರದಲ್ಲಿ 8.5 ಲಕ್ಷ ಶೌಚಾಲಯ ನಿರ್ಮಿಸಿದೆಯೇ?

By Suvarna Web DeskFirst Published Apr 13, 2018, 7:23 AM IST
Highlights

ಸ್ವಚ್ಛ ಭಾರತ ಯೋಜನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಬಿಹಾರ ಸರ್ಕಾರ ಒಂದೇ ವಾರದಲ್ಲಿ 8.5 ಲಕ್ಷ ಶೌಚಾಲಯಗಳನ್ನು ನಿರ್ಮಿಸಿದೆ! ಈ ಸುದ್ದಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಇತ್ತೀಚೆಗೆ ಬಿಹಾರದ ಸಮಾರಂಭವೊಂದರಲ್ಲಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಬಿಹಾರದಲ್ಲಿ ನಿತೀಶ್‌ ಕುಮಾರ್‌ ಸರ್ಕಾರ ಒಂದೇ ವಾರದಲ್ಲಿ 8.5 ಲಕ್ಷ ಶೌಚಾಲಯಗಳನ್ನು ನಿರ್ಮಿಸಿದೆ ಎಂದು ಶ್ಲಾಘಿಸಿದ್ದರು. ಇದು ನಿಜವೇ?

ಸ್ವಚ್ಛ ಭಾರತ ಯೋಜನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಬಿಹಾರ ಸರ್ಕಾರ ಒಂದೇ ವಾರದಲ್ಲಿ 8.5 ಲಕ್ಷ ಶೌಚಾಲಯಗಳನ್ನು ನಿರ್ಮಿಸಿದೆ! ಈ ಸುದ್ದಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಇತ್ತೀಚೆಗೆ ಬಿಹಾರದ ಸಮಾರಂಭವೊಂದರಲ್ಲಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಬಿಹಾರದಲ್ಲಿ ನಿತೀಶ್‌ ಕುಮಾರ್‌ ಸರ್ಕಾರ ಒಂದೇ ವಾರದಲ್ಲಿ 8.5 ಲಕ್ಷ ಶೌಚಾಲಯಗಳನ್ನು ನಿರ್ಮಿಸಿದೆ ಎಂದು ಶ್ಲಾಘಿಸಿದ್ದರು.

ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಗಳನ್ನು ಕೇಳಲಾಗುತ್ತಿದೆ. ಏಳು ದಿನದಲ್ಲಿ 8.5 ಲಕ್ಷ ಶೌಚಾಲಯ ನಿರ್ಮಿಸುವುದು ಹೇಗೆ ಸಾಧ್ಯ? ಒಂದು ವೇಳೆ ಶೌಚಾಲಯ ನಿರ್ಮಿಸಿದ್ದೇ ಹೌದಾದರೆ ಪ್ರತಿ ಸೆಕೆಂಡ್‌ಗೆ 1.4 ಶೌಚಾಲಯಗಳನ್ನು ನಿರ್ಮಿಸಬೇಕು! ಪ್ರತಿ ದಿನ 1,21,429 ಶೌಚಾಲಯಗಳನ್ನು ಸರ್ಕಾರ ನಿರ್ಮಿಸಿದೆಯೇ ಎಂಬ ಪ್ರಶ್ನೆಗಳನ್ನು ಕೇಳಲಾಗಿದೆ. ಈ ಸುದ್ದಿಯ ಬಗ್ಗೆ ಬಿಹಾರದ ಗ್ರಾಮೀಣಾಭಿವೃದ್ಧಿ ಸಚಿವ ಶ್ರವಣ ಕುಮಾರ್‌ ಅವರನ್ನು ಪಶ್ನಿಸಿದಾಗ, ‘ಶೌಚಾಲಯ ನಿರ್ಮಾಣ ಕಾಮಗಾರಿ ಮುಂಚೆಯೇ ಆರಂಭವಾಗಿತ್ತು. 10 ದಿನಗಳ ಅಂತರದಲ್ಲಿ ಅವುಗಳ ನಿರ್ಮಾಣವನ್ನು ಪೂರ್ಣಗೊಳಿಸಲಾಗಿದೆ’ ಎಂದು ಹೇಳಿದ್ದಾರೆ.

ಆದರೆ, ವಾಸ್ತವ ಸಂಗತಿಯೇನೆಂದರೆ, ಸರ್ಕಾರ ಹೇಳಿಕೊಂಡಂತೆ ಬಹುತೇಕ ಕಡೆಗಳಲ್ಲಿ ಶೌಚಾಲಯ ನಿರ್ಮಾಣ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕೆಲವೆಡೆ ಶೌಚಾಲಯದ ಗುಂಡಿಯನ್ನಷ್ಟೇ ತೋಡಲಾಗಿದ್ದು, ಮುಂದಿನ ದಿನಗಳಲ್ಲಿ ಕಾಮಗಾರಿಯನ್ನು ಮುಗಿಸುವುದಾಗಿ ಹೇಳಿ ಹೋದ ಅಧಿಕಾರಿಗಳು ಇದುವರೆಗೂ ಬಂದಿಲ್ಲ. ಹೀಗಾಗಿ ಬಿಹಾರದಲ್ಲಿ ಒಂದೇ ವಾರದಲ್ಲಿ 8.5 ಲಕ್ಷ ಶೌಚಾಲಯ ನಿರ್ಮಿಸಿದ ಸುದ್ದಿ ಸುಳ್ಳು ಎಂದು ಸಾಬೀತಾಗಿದೆ.

click me!