ಬಿಜೆಪಿ ಅಭ್ಯರ್ಥಿಗಳ ಫಸ್ಟ್‌ಲಿಸ್ಟ್ ಔಟ್?

Published : Mar 12, 2019, 09:04 AM ISTUpdated : Mar 12, 2019, 09:19 AM IST
ಬಿಜೆಪಿ ಅಭ್ಯರ್ಥಿಗಳ ಫಸ್ಟ್‌ಲಿಸ್ಟ್  ಔಟ್?

ಸಾರಾಂಶ

ಭಾರತೀಯ ಜನತಾ ಪಾರ್ಟಿ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಕಿರಿ ಪಟ್ಟಿಯನ್ನು ಬಿಡುಗಡೆ ಮಾಡಿದೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಬೆಂಗಳೂರು (ಮಾ. 12): ಭಾರತೀಯ ಜನತಾ ಪಾರ್ಟಿ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಕಿರಿ ಪಟ್ಟಿಯನ್ನು ಬಿಡುಗಡೆ ಮಾಡಿದೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಭಾರತೀಯ ಜನತಾ ಪಾರ್ಟಿ ಹೆಸರಿನಲ್ಲಿ ಪತ್ರಿಕಾ ಪ್ರಕಟಣೆಯೊಂದು ಹರಿದಾಡುತ್ತಿದ್ದು, ಅದರಲ್ಲಿ 24 ಲೋಕಸಭಾ ಅಭ್ಯರ್ಥಿಗಳ ಕ್ಷೇತ್ರ ಫೈನಲ್ ಪಟ್ಟಿ ಎಂದು ಹೇಳಲಾಗಿದೆ. ಜೊತೆಗೆ ಕೇಂದ್ರ ಸಚಿವ ಅರುಣ್ ಜೇಟ್ಲಿ ಪಿಲಿಬಿಟ್ ನಿಂದ ಮತ್ತು ಸ್ಮತಿ ಇರಾನಿ ಅಮೇಠಿಯಿಂದ ಸ್ಪರ್ಧಿಸುವುದಾಗಿ ಹೇಳಲಾಗಿದೆ. ಆದರೆ ನಿಜಕ್ಕೂ ಇದು ಅಸಲಿ ಪಟ್ಟಿಯೇ ಎಂದು ಪರಿಶೀಲಿಸಿದಾಗ ಇದು ನಕಲಿ ಎಂದು ತಿಳಿಸಿದೆ.

ಕ್ವಿಂಟ್ ‘ಬಿಜೆಪಿ ಅಧಿಕೃತ ವಕ್ತಾರರನ್ನು ಸಂಪರ್ಕಿಸಿ ಸ್ಪಷ್ಟನೆ ಪಡೆದಿದ್ದು, ಅವರು ಇದುವರೆಗೂ ಬಿಜೆಪಿ ಅಧಿಕೃತವಾಗಿ ಯಾವುದೇ ಪಟ್ಟಿಯನ್ನೂ ಬಿಡುಗಡೆ ಮಾಡಿಲ್ಲ. ಇದು ಸಂಪೂಣ ಸುಳ್ಳು ಸುದ್ದಿ’ ಎಂದು ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಳೆನರಸೀಪುರದ ಲಕ್ಷ್ಮಿನರಸಿಂಹ ಸ್ವಾಮಿ ರಥೋತ್ಸವ: ರಥದ ಅಲಂಕಾರದಲ್ಲಿ ರಾಜಕೀಯ:ಶ್ರೇಯಸ್ ಪಟೇಲ್ ವಿರುದ್ಧ JDS ಕಾರ್ಯಕರ್ತರ ಆಕ್ರೋಶ
ಇರಾನ್ ದಾಳಿಯ ಸಾವಿನ ದವಡೆಯಿಂದ ಪಾರಾಗಿ ಬೆಂಗಳೂರಿಗೆ ಬಂದಿಳಿದ 230 ಕನ್ನಡಿಗರು; ಬಾಂಬ್ ಬೀಳುವ ಅನುಭವ ಬಿಚ್ಚಿಟ್ಟರು!