ಕುಡಿದ ಮತ್ತಿನಲ್ಲಿ ಕಾಂಗ್ರೆಸ್ ಜನರಲ್ ಸೆಕ್ರೆಟರಿ ಪ್ರಿಯಾಂಕಾ ಗಾಂಧಿ?: ಇದು ನಿಜಾನಾ?

Published : Feb 04, 2019, 08:51 AM ISTUpdated : Feb 04, 2019, 09:04 AM IST
ಕುಡಿದ ಮತ್ತಿನಲ್ಲಿ ಕಾಂಗ್ರೆಸ್ ಜನರಲ್ ಸೆಕ್ರೆಟರಿ ಪ್ರಿಯಾಂಕಾ ಗಾಂಧಿ?: ಇದು ನಿಜಾನಾ?

ಸಾರಾಂಶ

ಕಾಂಗ್ರೆಸ್ ಜನರಲ್ ಸೆಕ್ರೆಟರಿಯಾಗಿ ನೇಮಕವಾಗಿರುವ ಪ್ರಿಯಾಂಕಾ ಗಾಂಧಿ ಕುಡಿದ ಮತ್ತಿನಲ್ಲಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ನಿಜಾನಾ? ಇಲ್ಲಿದೆ ಸುದ್ದಿಯಾಚೆಗಿನ ಸತ್ಯ.

ಕಾಂಗ್ರೆಸ್ ಜನರಲ್ ಸೆಕ್ರೆಟರಿಯಾಗಿ ನೇಮಕವಾಗಿರುವ ಪ್ರಿಯಾಂಕಾ ಗಾಂಧಿ ಕುಡಿದ ಮತ್ತಿನಲ್ಲಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಮ್‌ಲೋಗ್ ಎಂಬ ಫೇಸ್‌ಬುಕ್ ಪೇಜ್ ಈ ವಿಡಿಯೋವನ್ನು ಪೋಸ್ಟ್ ಮಾಡಿ, ‘ಕುಡಿದ ನಾಯಕರ ಮೇಲೆ ಕಾಂಗ್ರೆಸ್ ನಂಬಿಕೆ, ನಿರೀಕ್ಷೆ ಇಡಬಹುದು. ಆದರೆ ದೇಶದ ಜನರು ನಂಬಿಕೆ ಇಡಲು ಸಾಧ್ಯವಿಲ್ಲ’ ಎಂದು ಬರೆದಿದೆ.

ಈ ವಿಡಿಯೋ 4,800 ಬಾರಿ ಶೇರ್ ಆಗಿದೆ. ವಿಡಿಯೋದಲ್ಲಿ ಪ್ರಿಯಾಂಕಾ ಗಾಂಧಿ ಮಾಧ್ಯಮಗಳೆದುರು ಒರಟಾಗಿ ಮಾತನಾಡಿರುವ ದೃಶ್ಯವಿದೆ. ಆದರೆ ನಿಜಕ್ಕೂ ಪ್ರಿಯಾಂಕಾ ಗಾಂಧಿ ಮದ್ಯ ಸೇವಿಸಿದ್ದರೇ ಎಂದು ಪರಿಶೀಲಿಸಿದಾಗ, ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿರುವ ಸುದ್ದಿ ಸುಳ್ಳು ಎಂದು ತಿಳಿದು ಬಂದಿದೆ.

ವಾಸ್ತವವಾಗಿ 2015ರ ಏಪ್ರಿಲ್‌ನಲ್ಲಿ ಕಠುವಾ ಮತ್ತು ಉನ್ನಾವ್ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಚಳವಳಿಯ ವಿಡಿಯೋ ಎಂದು ತಿಳಿದುಬಂದಿದೆ. ಮೂಲ ವಿಡಿಯೋವನ್ನು ಪರಿಶೀಲಿಸಿದಾಗ ಆ ಹೋರಾಟದಲ್ಲಿ ಪ್ರಿಯಾಂಕಾ ಗಾಂಧಿ ಕೂಡ ಭಾಗಿಯಾಗಿದ್ದರು. ಆಗ ವಿಪರೀತ ಜನಸಂದಣಿಯಿಂದ ತಪ್ಪಿಸಿಕೊಳ್ಳುವ ವೇಳೆ ಮಾಧ್ಯಮಗಳೆದುರು ಒರಟಾಗಿ ವರ್ತಿಸಿದ್ದರು. ನೂಕುನುಗ್ಗಲು ಮಾಡದಂತೆ, ತಳ್ಳದಂತೆ ಜನರನ್ನು ಪ್ರಿಯಾಂಕಾ ಕೇಳಿಕೊಂಡಿದ್ದರು. ಆಗಿನ ಪ್ರತಿಭಟನೆಯಲ್ಲಿ ನೂರಾರು ಮಂದಿ ಭಾಗವಹಿಸಿದ್ದು, ಆ ಜನಸಂದಣಿಯನ್ನು ನಿಯಂತ್ರಿಸುವಲ್ಲಿ ಪೊಲೀಸರು ಹೈರಾಣಾಗಿದ್ದರು ಎಂದು ತಿಳಿದುಬಂದಿದೆ.

ಸದ್ಯ ಇದೇ ವಿಡಿಯೋವನ್ನು ಬಳಸಿಕೊಂಡು ಪ್ರಿಯಾಂಕಾ ಗಾಂಧಿ ಕುಡಿದ ಮತ್ತಿನಲ್ಲಿದ್ದಾರೆ ಅಥವಾ ಅವರಿಕೆ ಕುಡಿಯುವ ಚಟ ಇದೆ ಎಂದು ಸುಳ್ಳುಸುದ್ದಿ ಹರಡಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು