ಜ್ವರಕ್ಕೆ ಬಳಸುವ ಪ್ಯಾರಾಸಿಟಮಾಲ್ ಮಾತ್ರೆಯಲ್ಲಿ ಮಾರಕ ವೈರಸ್..?

Published : Jul 19, 2018, 11:45 AM IST
ಜ್ವರಕ್ಕೆ ಬಳಸುವ ಪ್ಯಾರಾಸಿಟಮಾಲ್ ಮಾತ್ರೆಯಲ್ಲಿ ಮಾರಕ ವೈರಸ್..?

ಸಾರಾಂಶ

ಜ್ವರ, ಮೈ-ಕೈ ನೋವು, ಶೀತ. ಇನ್ನಿತರ ಸಣ್ಣಪುಟ್ಟ ಕಾಯಿಲೆಗಳಿಗೆ ಪ್ಯಾರಸಿಟಮಾಲ್ ಮಾತ್ರೆ ತೆಗೆದುಕೊಳ್ಳುತ್ತೇವೆ. ಆದರೆ, ಸುರಕ್ಷಿತ ಮಾತ್ರೆ  ಎಂದೇ ಹೇಳಲಾಗುವ ಪ್ಯಾರಸಿಟಮಾಲ್‌ಗಳು ಮಾರಕ ವೈರಸ್‌ನಿಂದ ಕೂಡಿವೆ.

ಬೆಂಗಳೂರು :  ಜ್ವರ, ಮೈ-ಕೈ ನೋವು, ಶೀತ. ಇನ್ನಿತರ ಸಣ್ಣಪುಟ್ಟ ಕಾಯಿಲೆಗಳಿಗೆ ಪ್ಯಾರಸಿಟಮಾಲ್ ಮಾತ್ರೆ ತೆಗೆದುಕೊಳ್ಳುತ್ತೇವೆ. ಆದರೆ, ಸುರಕ್ಷಿತ ಮಾತ್ರೆ  ಎಂದೇ ಹೇಳಲಾಗುವ ಪ್ಯಾರಸಿಟಮಾಲ್‌ಗಳು ಮಾರಕ ವೈರಸ್‌ನಿಂದ ಕೂಡಿವೆ. ಅವುಗಳ ಸೇವನೆ ಆರೋಗ್ಯಕ್ಕೆ ಅಪಾಯಕಾರಿ. ಹೀಗಾಗಿ ಪ್ಯಾರಸಿಟಮಾಲ್ ಮಾತ್ರೆಗಳನ್ನು ಸೇವಿಸಬೇಡಿ ಎಂಬ ಸಂದೇಶವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. 

ಪಿ/500 ಮಾತ್ರೆಗಳನ್ನು ಸೇವಿಸುವ ಮುನ್ನ ಎಚ್ಚರ ವಹಿಸಿ. ಬಿಳಿಯ ಬಣ್ಣದ ಈ ಮಾತ್ರೆಯಲ್ಲಿ ಅತ್ಯಂತ ಅಪಾಯಕಾರಿಯಾದ ಮಾಚುಪೋ ಅಥವಾ ಬ್ಲ್ಯಾಕ್ ಟೈಪಸ್ ಎಂಬ ವೈರಸ್ ಇರುವುದು ವೈದ್ಯಕೀಯ ಪರೀಕ್ಷೆಯಿಂದ ಸಾಬೀತಾಗಿದೆ. ಇದರ ಸೇವನೆಯಿಂದ ಸಾವು ಸಂಭವಿಸಬಹುದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಸಂದೇಶದಲ್ಲಿ ಬರೆಯಲಾಗಿದೆ. ಭಾರತ ಮಾತ್ರವಲ್ಲ ಇಂಡೋನೇಷ್ಯಾದಲ್ಲೂ ಇದೇ ರೀತಿ ವದಂತಿ ಹಬ್ಬಿತ್ತು. 

ಈ ಹಿನ್ನೆಲೆಯಲ್ಲಿ ಜನರ ಆತಂಕವನ್ನು ನಿವಾರಿಸುವ ನಿಟ್ಟಿನಿಂದ ಇಂಡೋನೋಷ್ಯಾದ ಆಹಾರ ಮತ್ತು ಔಷಧ ನಿಯಂತ್ರಣ ಪ್ರಾಧಿಕಾರ ಪ್ಯಾರಸಿಟಮಾಲ್ ಮಾತ್ರೆಯನ್ನು ಪ್ರಯೋಗಾಲ ಯದಲ್ಲಿ ಪರೀಕ್ಷೆಗೆ ಒಳಪಡಿಸಿದ್ದು, ಅದೊಂದು ಸುಳ್ಳುಸುದ್ದಿ ಎಂದು ತಿಳಿಸಿದೆ. ಪ್ಯಾರಸಿಟಮಾಲ್ ಜಗತ್ತಿನೆಲ್ಲೆಡೆ ಬಳಕೆಯಾಗುವ ಸಾಮಾನ್ಯ ಔಷಧ. 

ಈ ಮಾತ್ರೆ ಯನ್ನು ಅತ್ಯಂತ ಸುರಕ್ಷಿತ ಎಂದೇ ಭಾವಿಸಲಾಗಿದೆ. ಯಾವುದೇ ಮಾತ್ರೆ ಮಾರುಕಟ್ಟೆಗೆ ಬಿಡುಗಡೆ ಆಗುವುದಕ್ಕೂ ಮುನ್ನ ಸರ್ಕಾರದಿಂದ ಅಧಿಕೃತ ಪರವಾನಗಿ ಪಡೆದಿರಬೇಕು. ಜೊತೆಗೆ ಎರಡು ಬಾರಿ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಬೇಕು. ಅದಾದ ಬಳಿಕವೇ ಮಾರುಕಟ್ಟೆಗೆ ಬಿಡುಗಡೆ ಆಗುತ್ತದೆ. ಹೀಗಾಗಿ ಪ್ಯಾರಸಿಟಮಾಲ್ ಮಾತ್ರೆಯಲ್ಲಿ ಘಾತಕ ವೈರಸ್ ಇದೆ ಎನ್ನುವುದಕ್ಕೆ ಯಾವುದೇ ಆಧಾರಗಳಿಲ್ಲ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ತಮಿಳು ಚಿತ್ರದಲ್ಲಿ ಕನ್ನಡ ಹಾಡು ಬಳಸಿದ್ದಕ್ಕೆ ದಂಡ, ಒಟಿಟಿ ರಿಲೀಸ್‌ಗೂ ಮುನ್ನ 30 ಲಕ್ಷ ಠೇವಣಿ ಇಡಿ ಎಂದ ಕೋರ್ಟ್‌!