ವಾಜಪೇಯಿ ನಿಧನ: ಏಮ್ಸ್‌ನಲ್ಲಿ ಪ್ರಧಾನಿ ಮೋದಿ ನಕ್ಕಿದ್ದು ಹೌದಾ?

Published : Aug 21, 2018, 12:02 PM ISTUpdated : Sep 09, 2018, 08:39 PM IST
ವಾಜಪೇಯಿ ನಿಧನ: ಏಮ್ಸ್‌ನಲ್ಲಿ ಪ್ರಧಾನಿ ಮೋದಿ ನಕ್ಕಿದ್ದು ಹೌದಾ?

ಸಾರಾಂಶ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನದ ಬಳಿಕ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಏಮ್ಸ್ ಆಸ್ಪತ್ರೆಯ ಡಾಕ್ಟರ್‌ಗಳ ಜೊತೆಗೂಡಿ  ನಗುತ್ತಿದ್ದರು ಎಂಬ ಒಕ್ಕಣೆಯೊಂದಿಗಿನ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನವದೆಹಲಿ (ಆ. 21): ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ  ನಿಧನದ ಬಳಿಕ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಏಮ್ಸ್ ಆಸ್ಪತ್ರೆಯ ಡಾಕ್ಟರ್‌ಗಳ ಜೊತೆಗೂಡಿ ನಗುತ್ತಿದ್ದರು ಎಂಬ ಒಕ್ಕಣೆಯೊಂದಿಗಿನ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

‘ಆಮ್ ಆದ್ಮಿ ಜಿಂದಾಬಾದ್’ ಎಂಬ ಫೇಸ್‌ಬುಕ್ ಪೇಜ್ ಮೊದಲಿಗೆ ಈ ಫೋಟೋದೊಂದಿಗೆ ‘ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ಪ್ರಧಾನಿ  ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ’ ಎಂದು ವ್ಯಂಗ್ಯವಾಗಿ ಅಡಿಬರಹವನ್ನು ಬರೆದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದೆ. ಅದು 2,200 ಬಾರಿ ಶೇರ್ ಆಗಿದೆ.

ಆದರೆ ನಿಜಕ್ಕೂ ಮಾಜಿ ಪ್ರಧಾನಿ ವಾಜಪೇಯಿ ನಿಧನದ ಬಳಿಕ ನರೇಂದ್ರ ಮೋದಿ ದೆಹಲಿಯ ಏಮ್ಸ್ ಆಸ್ಪತ್ರೆಯ ಡಾಕ್ಟರ್‌ಗಳ ಜೊತೆಗೂಡಿ ನಗುತ್ತಿದ್ದುದು ನಿಜವೇ ಎಂದು ಪರಿಶೀಲಿಸಿದಾಗ ಅದು ಹಳೆಯ ಫೋಟೋ ಎಂಬುದು ಪತ್ತೆಯಾಗಿದೆ. ವಾಜಪೇಯಿ ನಿಧನರಾದ ದಿನ ಮೋದಿ ಆಸ್ಪತ್ರೆಗೆ ತೆರಳಿದ್ದಾಗ ಬಿಳಿ ಬಣ್ಣದ ಪೂರ್ಣ ಕೈತೋಳಿನ ಕುರ್ತಾ ಧರಿಸಿದ್ದರು.

2016 ರ ಫೋಟೋವನ್ನು ಬಳಸಿಕೊಂಡು ವಾಜಪೇಯಿ ನಿಧನರಾದ ಬಳಿಕ ಮೋದಿ ವೈದ್ಯರ ಜೊತೆಗೂಡಿ ನಗುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸಲಾಗಿದೆ. ಅಲ್ಲದೆ ನರೇಂದ್ರ ಮೋದಿ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದು ಆಗಸ್ಟ್ 16 ರ ಮಧ್ಯಾಹ್ನ 2;45 ಕ್ಕೆ, ಆದರೆ ವಾಜಪೇಯಿ ನಿಧನರಾಗಿದ್ದು ಸಂಜೆ 5.5 ಕ್ಕೆ. ಹಾಗಾಗಿ ವಾಜಪೇಯಿ ನಿಧನರಾದ ಬಳಿಕ ಮೋದಿ ನಗುತ್ತಿದ್ದರು ಎಂದು ಹೇಳಲು ಸಾಧ್ಯವಿಲ್ಲ. ಹಾಗಾಗಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನರಾದ ಬಳಿಕ ನರೇಂದ್ರ ಮೋದಿ ನಗುತ್ತಿದ್ದರು ಎಂಬ ಒಕ್ಕಣೆಯೊಂದಿಗೆ ಹರಿದಾಡುತ್ತಿರುವ ಸುದ್ದಿ ಸುಳ್ಳು. 

-ವೈರಲ್ ಚೆಕ್  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತದ ಬೀಡಿಗೆ ಫಿದಾ ಆದ ರಷ್ಯನ್ನರು, ಒಂದು ಪ್ಯಾಕೆಟ್‌ ಇಷ್ಟು ದುಬಾರಿನಾ?
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!