ಡಿಸೆಂಬರ್ ನಲ್ಲಿ ವಿರಾಟ್ ಕೊಹ್ಲಿ-ಅನುಷ್ಕಾ ಮದುವೆ?

Published : Oct 24, 2017, 06:32 PM ISTUpdated : Apr 11, 2018, 01:06 PM IST
ಡಿಸೆಂಬರ್ ನಲ್ಲಿ ವಿರಾಟ್ ಕೊಹ್ಲಿ-ಅನುಷ್ಕಾ ಮದುವೆ?

ಸಾರಾಂಶ

ನನಗೆ ರೆಸ್ಟ್ ಬೇಕು ಎಂದು ವಿರಾಟ್ ಕೊಹ್ಲಿ ಈಗಾಗಲೇ ಬಿಸಿಸಿಐಗೆ ಮನವಿ ಮಾಡಿದ್ದಾರೆ. ಇದಕ್ಕೆ ಕಾರಣ ಏನು ಗೊತ್ತಾ? ಟೀಂ ಇಂಡಿಯಾ ಕ್ಯಾಪ್ಟನ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮದುವೆ ಆಗುತ್ತಿದ್ದಾರಂತೆ!

ನವದೆಹಲಿ (ಅ.24): ನನಗೆ ರೆಸ್ಟ್ ಬೇಕು ಎಂದು ವಿರಾಟ್ ಕೊಹ್ಲಿ ಈಗಾಗಲೇ ಬಿಸಿಸಿಐಗೆ ಮನವಿ ಮಾಡಿದ್ದಾರೆ. ಇದಕ್ಕೆ ಕಾರಣ ಏನು ಗೊತ್ತಾ? ಟೀಂ ಇಂಡಿಯಾ ಕ್ಯಾಪ್ಟನ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮದುವೆ ಆಗುತ್ತಿದ್ದಾರಂತೆ!

ತಮ್ಮ ಬಹುಕಾಲದ ಗೆಳತಿಯೊಂದಿಗೆ ಕಂಕಣಕ್ಕಾಗಿಯೇ ಕೊಹ್ಲಿ ಆಟಕ್ಕೆ ಬ್ರೇಕ್ ಬಯಸಿದ್ದಾರೆ. ಡಿಸೆಂಬರ್ ನಲ್ಲಿ ಈ ಸ್ಟಾರ್ ಜೋಡಿ ಸಪ್ತಪದಿ ತುಳಿಯಲಿದೆ ಎಂದು ಮೂಲಗಳು ತಿಳಿಸಿವೆ. ನಿನ್ನೆಯಷ್ಟೇ ಶ್ರೀಲಂಕಾ ವಿರುದ್ಧದ ಸರಣಿಗೆ ಬಿಸಿಸಿಐ ಟೀಮ್ ಇಂಡಿಯಾವನ್ನು ಸೆಲೆಕ್ಟ್ ಮಾಡಿದೆ. ನವೆಂಬರ್ 16ರಂದು ಶುರುವಾಗೋ ಮೊದಲೆರಡು ಟೆಸ್ಟ್ ಗೆ ಮಾತ್ರ ಪಾಳಯ ಪ್ರಕಟವಾಗಿದೆ. ಆದರೆ ಕೊನೆಯ ಟೆಸ್ಟ್, ಏಕದಿನ, ಟಿ-ಟ್ವೆಂಟಿಗೆ ನಂತರವಷ್ಟೇ ತಂಡವನ್ನು ಆಯ್ಕೆ ಮಾಡಲಾಗುತ್ತದೆ. ಬಿಸಿಸಿಐ ಕೂಡಾ ವಿರಾಟ್ ಕೊಹ್ಲಿಗೆ ರೆಸ್ಟ್ ನೀಡೋ ಬಗ್ಗೆ ಸುಳಿವು ನೀಡಿದೆ. ಹೀಗಾಗಿ ರೋಹಿತ್ ಶರ್ಮಾ ಕ್ಯಾಪ್ಟನ್ ಆಗಲಿದ್ದಾರೆ ಎನ್ನಲಾಗುತ್ತಿದೆ. ವೈಯಕ್ತಿಕ ಕಾರಣಗಳಿಂದಾಗಿ ಈ ಸರಣಿಯಲ್ಲಿ ತಮಗೆ ಆಡಲು ಸಾಧ್ಯವಾಗುತ್ತಿಲ್ಲ ಎಂದು ಬಿಸಿಸಿಐಗೆ ಬರೆದ ಮನವಿಯಲ್ಲಿ ತಿಳಿಸಿದ್ದರು. ಜನವರಿಯಿಂದ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾದ ಪ್ರವಾಸ ಕೈಗೊಳ್ಳಲಿದ್ದು, ನಿರಂತರ ಕ್ರಿಕೆಟ್ ಆಡುತ್ತೀರೋ ಕೊಹ್ಲಿ ಅದಕ್ಕೂ ಮೊದಲು ಕೊಂಚ ವಿರಾಮ ಬಯಸಿದ್ದು, ಹಲವು ಅನುಮಾನಗಳು ವ್ಯಕ್ತವಾಗಿದ್ದವು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೋವಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಕ್ಲೀನ್ ಸ್ವೀಪ್ ಗೆಲುವು, 10 ಸ್ಥಾನಕ್ಕೆ ತೃಪ್ತಿಪಟ್ಟ ಕಾಂಗ್ರೆಸ್
ಮಹಿಳೆ ಬಲಿ ಪಡೆದ ಚಿರತೆ ಕೊನೆಗೂ ಸೆರೆ, ದಾಳಿ ಮಾಡಿದ ಅದೇ ಸ್ಥಳದಲ್ಲೇ ಕಾರ್ಯಾಚರಣೆ