ವಿಷ್ಣು ಸ್ಮಾರಕ ಮೈಸೂರಲ್ಲೇ ನಿರ್ಮಾಣ?

Published : Dec 03, 2018, 03:11 PM IST
ವಿಷ್ಣು  ಸ್ಮಾರಕ ಮೈಸೂರಲ್ಲೇ ನಿರ್ಮಾಣ?

ಸಾರಾಂಶ

ಮೈಸೂರಿನಲ್ಲೇ ವಿಷ್ಣು ಸ್ಮಾರಕ ನಿರ್ಮಾಣ ಮಾಡಬೇಕೆಂದು ಅಭಿಮಾನಿಗಳ ಒತ್ತಾಯ | ಸರ್ಕಾರ ನಿಗದಿಪಡಿಸಿದ ಜಾಗಕ್ಕೆ ಏಕಾಏಕಿ ನುಗ್ಗಿದ ಅಭಿಮಾನಿಗಳು 

ಮೈಸೂರು (ಡಿ. 03): ಸಾಹಸಸಿಂಹ ಡಾ.ವಿಷ್ಣುವರ್ಧನ್ ಸ್ಮಾರಕ ಜಾಗ ವಿವಾದ ಕಗ್ಗಂಟಾಗಿಯೇ ಉಳಿದಿದೆ. 

ಮೈಸೂರಿನಲ್ಲೇ ವಿಷ್ಣು ಸ್ಮಾರಕ ನಿರ್ಮಾಣ ಮಾಡಲು ಒತ್ತಡ ಹೆಚ್ಚಾಗಿದೆ. ಮೈಸೂರು ತಾಲೂಕು ಹಾಲಾಳು ಗ್ರಾಮದಲ್ಲಿರುವ ಸ್ಥಳವೊಂದನ್ನು ವಿಷ್ಣು ಸ್ಮಾರಕ ನಿರ್ಮಾಣಕ್ಕಾಗಿ ಸರ್ಕಾರ ಗುರುತಿಸಿದೆ. ಇಲ್ಲಿಗೆ ಏಕಾಏಕಿ ನುಗ್ಗಿದ ವಿಷ್ಣುಸೇನಾ ಸದಸ್ಯರು ಜಾಗದಲ್ಲಿದ್ದ ಗಿಡಗಂಟೆಗಳನ್ನು ಶುಚಿಗೊಳಿಸಿದ್ದಾರೆ. 

ಹೋಮಕುಂಡ ಸರಿಪಡಿಸಿ ಪೂಜೆಗಾಗಿ ಸಿದ್ಧತೆ ನಡೆಸಿದ್ದಾರೆ.  ವಿಷ್ಣು ಸ್ಮಾರಕ ನಿರ್ಮಾಣ ಆಗುವವರೆಗೆ ಸ್ಥಳದಲ್ಲಿ ಹೋರಾಟ ಮಾಡಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. 

ಸ್ಮಾರಕ ಮಾಡಲು ಸರ್ಕಾರಕ್ಕೆ ವಿಷ್ಣು ಅಭಿಮಾನಿಗಳು ಗಡುವು ಕೊಟ್ಟಿದ್ದಾರೆ.  ಡಿಸೆಂಬರ್ 30 ವಿಷ್ಣುವರ್ಧನ್ ಪುಣ್ಯ ಸ್ಮರಣೆ ಹೊತ್ತಿಗೆ ಸ್ಮಾರಕ ಜಾಗದಲ್ಲಿ ಗುದ್ದಲಿ ಪೂಜೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. 

ವಿಷ್ಣು ಸೇನಾ ಸಮಿತಿ ಮಂಡ್ಯ ಜಿಲ್ಲಾಧ್ಯಕ್ಷ ಶ್ರೀಕಂಠ ನೇತೃತ್ವದಲ್ಲಿ ಹೋರಾಟ ಆರಂಭಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಾಲೀಕನ ನಿಧನಕ್ಕೆ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ ಶ್ವಾನ; ವಿಡಿಯೋ ನೋಡಿ ಭಾವುಕರಾದ ಜನರು
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ