
ಬೆಂಗಳೂರು : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೆಚ್ಚಿದೆ. ರಾಮ ಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರವನ್ನ ಒತ್ತಾಯಿಸಲು ವಿಶ್ವ ಹಿಂದೂ ಪರಿಷತ್ ಸಜ್ಜಾಗಿದ್ದು, ದೇಶವ್ಯಾಪಿ ಜನಾಗ್ರಹ ಸಭೆ ಆಯೋಜನೆ ಮಾಡಲಾಗಿದೆ.
ಈ ಸಂಬಂಧ ಬೆಂಗಳೂರು, ನಾಗಪುರ, ಆಯೋಧ್ಯೆ, ದೆಹಲಿಯಲ್ಲಿ ಬೃಹತ್ ಜನಾಗ್ರಹ ಸಭೆಯನ್ನು ನಡೆಸಲಾಗುತ್ತಿದೆ. ಬೆಂಗಳೂರು ಮತ್ತು ನಾಗಪುರದಲ್ಲಿ ಇದೇ ನ.25ರಂದು ಬೃಹತ್ ಹಿಂದು ಸಮಾವೇಶ ನಡೆಯಲಿದ್ದು, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ವಿಶ್ವಹಿಂದೂ ಪರಿಷತ್ ನೇತೃತ್ವದಲ್ಲಿ ಬೃಹತ್ ಜನಾಗ್ರಹ ಸಭೆ ನಡೆಸಲಾಗುತ್ತದೆ.
ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಭಾನುವಾರ ಬೃಹತ್ ಸಮಾವೇಶ ನಡೆಯಲಿದ್ದು, ಸಮಾವೇಶದಲ್ಲಿ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು, ಆದಿಚುಂಚನಗಿರಿ ಮಠದ ನಿರ್ಮಾಲಾನಂದ ಸ್ವಾಮಿಗಳು, ಸಿದ್ದಗಂಗಾ ಮಠದ ಸಿದ್ದಲಿಂಗಾ ಮಹಸ್ವಾಮಿಗಳು ಆಶಿರ್ವಚನ ನೀಡಲಿದ್ದಾರೆ.
ಅಲ್ಲದೇ ಸಮಾವೇಶದಲ್ಲಿ ವಿಹೆಚ್ ಪಿಯ ಅಂತರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಮಿಲಿಂದಜೆ ಪರಾಂಡೆ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹಕಾರ್ಯವಹರಾದ ಭಯ್ಯಾಜಿ ಮತ್ತು ಹರಿದ್ವಾರದ ಚಿನ್ಮಯಾನಂದ ಸರಸ್ವತಿ ಮಹಾರಾಜ್ ಭಾಗಿಯಾಲಿದ್ದಾರೆ.
ರಾಮ ಮಂದಿರ ವಿಚಾರದಲ್ಲಿ ನ್ಯಾಯಾಲಯದಿಂದ ವಿಳಂಬವಾಗುತ್ತಿದ್ದೆ ಇದನ್ನ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ರಾಮ ಮಂದಿರ ನಿರ್ಮಾಣ ಕುರಿತು ಮಸೂದೆಯನ್ನ ಅಂಗಿಕರಿಸಬೇಕು ಎಂಬುದು ಆಗ್ರಹ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ