ರಾಜ್ಯೋತ್ಸವದ ದಿನದಂದು ಕಲಬುರ್ಗಿಯಲ್ಲಿ ಪ್ರತ್ಯೇಕ ರಾಜ್ಯದ ಕೂಗು

Published : Nov 01, 2016, 05:51 AM ISTUpdated : Apr 11, 2018, 01:04 PM IST
ರಾಜ್ಯೋತ್ಸವದ ದಿನದಂದು ಕಲಬುರ್ಗಿಯಲ್ಲಿ ಪ್ರತ್ಯೇಕ ರಾಜ್ಯದ ಕೂಗು

ಸಾರಾಂಶ

ಎಂಎಸ್ ಪಾಟೀಲ್ ನರಿಬೋಳ ಸೇರಿದಂತೆ 30ಕ್ಕೂ ಹೆಚ್ಚು ಹೋರಾಟಗಾರರನ್ನು ಪೊಲೀಸರು ಬಂಧಿಸಿದರು. ಮುಂಜಾಗ್ರತಾ ಕ್ರಮವಾಗಿ ಈ ವೃತ್ತದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದರಿಂದ ಯಾವುದೇ ಅವಘಡ ಸಂಭವಿಸಲಿಲ್ಲ.

ಕಲಬುರ್ಗಿ(ನ. 01): ರಾಜ್ಯದೆಲ್ಲೆಡೆ ಅಖಂಡ ಕರ್ನಾಟಕದ ಹಾಗೂ ಕನ್ನಡ ರಾಜ್ಯೋತ್ಸವದ ಸಂಭ್ರಮ ನೆಲಸಿದ್ದರೆ ಕಲಬುರ್ಗಿಯಲ್ಲಿ ಕೆಲ ವ್ಯಕ್ತಿಗಳು ಪ್ರತ್ಯೇಕ ರಾಜ್ಯದ ಧ್ವನಿ ಎತ್ತರಿಸಿದ್ದಾರೆ. ಇಲ್ಲಿಯ ಸರ್ದಾರ್ ವಲ್ಲಭ ಭಾಯ್ ಪಟೇಲ್ ವೃತ್ತದಲ್ಲಿ ಪ್ರತ್ಯೇಕ ರಾಜ್ಯಕ್ಕೆ ಒತ್ತಾಯಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು. ಇವರು ಕಲ್ಯಾಣ ಕರ್ನಾಟಕದ ಧ್ವಜಾರೋಹಣಕ್ಕೆ ಮಾಡಿದ ಪ್ರಯತ್ನವನ್ನು ಪೊಲೀಸರು ವಿಫಲಗೊಳಿಸಿದರು. ಈ ವೇಳೆ ಎಂಎಸ್ ಪಾಟೀಲ್ ನರಿಬೋಳ ಸೇರಿದಂತೆ 30ಕ್ಕೂ ಹೆಚ್ಚು ಹೋರಾಟಗಾರರನ್ನು ಪೊಲೀಸರು ಬಂಧಿಸಿದರು. ಮುಂಜಾಗ್ರತಾ ಕ್ರಮವಾಗಿ ಈ ವೃತ್ತದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದರಿಂದ ಯಾವುದೇ ಅವಘಡ ಸಂಭವಿಸಲಿಲ್ಲ.

ಪ್ರತ್ಯೇಕ ರಾಜ್ಯದ ಕೂಗೇಕೆ?
ಹೈದರಾಬಾದ್-ಕರ್ನಾಟಕ ಭಾಗಕ್ಕೆ ಪ್ರತ್ಯೇಕ ಇತಿಹಾಸವಿದೆ. ಅಲ್ಲದೇ ಈ ಭಾಗದ ಜಿಲ್ಲೆಗಳನ್ನು ಕರ್ನಾಟಕದ ಸರಕಾರಗಳು ದಶಕಗಳಿಂದ ಕಡೆಗಣಿಸುತ್ತಾ ಬಂದಿವೆ. ಇದರಿಂದ ಈ ಭಾಗದ ಜಿಲ್ಲೆಗಳು ತೀರಾ ಹಿಂದುಳಿಯುವಂತಾಗಿದೆ. ಕಲ್ಯಾಣ ಕರ್ನಾಟಕ ರಾಜ್ಯದ ಸ್ಥಾಪನೆಯಿಂದ ಈ ಭಾಗದ ಅಭಿವೃದ್ಧಿ ಸಾಧ್ಯ ಎಂಬುದು ಪ್ರತ್ಯೇಕತಾವಾದಿಗಳ ವಾದ. ಇದೀಗ, ಆಂಧ್ರಪ್ರದೇಶದಿಂದ ತೆಲಂಗಾಣವನ್ನು ವಿಭಜನೆ ಮಾಡಿರುವುದು ಕಲ್ಯಾಣ ಕರ್ನಾಟಕ ರಾಜ್ಯದ ಕೂಗಿಗೆ ಇನ್ನಷ್ಟು ಬಲ ಸಿಕ್ಕಂತಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ