
ಬೆಂಗಳೂರು[ಆ.22]: ಮಾಜಿ ಸಂಸದ ಹಾಗೂ ಕಾಂಗ್ರೆಸ್ ವಕ್ತಾರರಾದ ವಿ.ಎಸ್. ಉಗ್ರಪ್ಪ ಅವರನ್ನು ರಾಜ್ಯ ಕಾಂಗ್ರೆಸ್ ಮಾಧ್ಯಮ ವಿಭಾಗದ ಮುಖ್ಯಸ್ಥರನ್ನಾಗಿ ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರು, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷರಾಗಿದ್ದ ರಿಜ್ವಾನ್ ಅರ್ಷದ್ ಅವರನ್ನು ಬದಲಿಸಿ, ವಿ.ಎಸ್. ಉಗ್ರಪ್ಪ ಅವರನ್ನು ತಕ್ಷಣದಿಂದ ಅನ್ವಯವಾಗುವಂತೆ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಮಾಧ್ಯಮ ವಿಭಾಗಕ್ಕೆ ಅಧ್ಯಕ್ಷರಾದ ಬೆನ್ನ ಹಿಂದೆಯೇ ಉಗ್ರಪ್ಪ ಅವರು ಕಾಂಗ್ರೆಸ್‌ನ ರಾಜ್ಯ ಹಾಗೂ ಜಿಲ್ಲಾ ಮಟ್ಟದ ವಕ್ತಾರರು ಹಾಗೂ ಮಾಧ್ಯಮ ವಿಭಾಗದ ಪ್ರಮುಖರ ಸಭೆಯಲ್ಲಿ ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದು, ಮಾಧ್ಯಮ ವಿಭಾಗವನ್ನು ಮತ್ತಷ್ಟುಬಲಪಡಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮಾಧ್ಯಮ ವಿಭಾಗದ ಪ್ರಕಟಣೆ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.