ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಸಮನ್ಸ್

Published : Oct 05, 2018, 04:05 PM ISTUpdated : Oct 05, 2018, 04:16 PM IST
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಸಮನ್ಸ್

ಸಾರಾಂಶ

ವ್ಯಕ್ತಿಯೋರ್ವನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ರಾಘವೇಶ್ವರ ಶ್ರೀ, ಹಾಗೂ ಆರ್ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್, ಶಿವಶಂಕರ ಭಟ್ ಗೆ ಸಮನ್ಸ್ ಜಾರಿ ಮಾಡಲಾಗಿದೆ.

ಮಂಗಳೂರು, (ಅ.5):  ರಾಘವೇಶ್ವರ ಶ್ರೀ, ಹಾಗೂ ಆರ್ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್, ಶಿವಶಂಕರ ಭಟ್ ಗೆ ಸಮನ್ಸ್ ಜಾರಿ ಮಾಡಲಾಗಿದೆ.

2014 ರ ಕೇದಿಗೆ ಶ್ಯಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪ್ರಧಾನ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಅ.31 ರಂದು ಕೋರ್ಟ್ ಗೆ ಹಾಜರಾಗುವಂತೆ ಸಮನ್ಸ್ ನೀಡಿದೆ. 2014 ಸೆ. 1 ರಂದು ಪುತ್ತೂರಿನ ಕೆದಿಲ ಬಡೆಕ್ಕಿಲದಲ್ಲಿ ರಾಮಕಥಾ ಗಾಯಕಿ ಪ್ರೇಮಲತಾ ಪತಿಯ ತಮ್ಮ ಶ್ಯಾಮ್ ಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದರು.

ಪ್ರೇಮಲತಾ ಶಾಸ್ತ್ರಿ‌ ಅವರು ರಾಘವೇಶ್ವರ ಸ್ವಾಮೀಜಿ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದರು. ಆರೋಪಕ್ಕೆ ಸಂಬಂಧಿಸಿದಂತೆ ರಾಘವೇಶ್ವರ ಸ್ವಾಮೀಜಿ ಪರ ಸಾಕ್ಷಿ ಹೇಳುವಂತೆ ಶ್ಯಾಮ್ ಪ್ರಸಾದ್ ಗೆ ಪೋನ್ ಕರೆ ಮಾಡಿ‌ ಬೆದರಿಕೆ ಒಡ್ಡಿದ್ದು, ಇದರಿಂದ ವಿಚಲಿತನಾಗಿ ಶ್ಯಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆಗೆ ಶರಣಾಗಿದ್ದರು.

ಆರೋಪಿಗಳಿಂದ ಆತ್ಮಹತ್ಯೆಗೆ ಪ್ರಚೋದನೆ ಹಾಗೂ ಬೆದರಿಕೆಯ ಕುರಿತಾಗಿ ಕಲ್ಲಡ್ಕ ಪ್ರಭಾಕರ್ ಭಟ್ ,ರಾಘವೇಶ್ವರ ಸ್ವಾಮೀಜಿ ಹಾಗೂ ಬೋನಂತಾಯ ಶಿವಶಂಕರ ಭಟ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರನ ₹8 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ!
ಕಂಟೋನ್ಮೆಂಟ್‌ ರೈಲು ನಿಲ್ದಾಣದ 371 ಮರ ಕಡಿಯಲು ಹೈಕೋರ್ಟ್‌ ತಡೆ, ತನ್ನ ಅನುಮತಿ ಇಲ್ಲದೆ ಏನೂ ಮಾಡುವಂತಿಲ್ಲವೆಂದು ಆರ್ಡರ್