ಬಿಜೆಪಿಯತ್ತ ಕಾಂಗ್ರೆಸ್ ಶಾಸಕರು ?

Published : Aug 09, 2018, 08:06 AM IST
ಬಿಜೆಪಿಯತ್ತ ಕಾಂಗ್ರೆಸ್ ಶಾಸಕರು ?

ಸಾರಾಂಶ

ಕಾಂಗ್ರೆಸ್ ಶಾಸಕರನ್ನು ಸೆಳೆದುಕೊಂಡು ಬಿಜೆಪಿ ಆಪರೇಷನ್ ಕಮಲ ಮಾಡುತ್ತಿದೆ ಎನ್ನುವ ಬಗ್ಗೆ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿ ನಮಗದರ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ಬೆಂಗಳೂರು: ಆಪರೇಷನ್ ಕಮಲ ಮಾಡುವ ಅಗತ್ಯ ನಮ್ಮ ಪಕ್ಷಕ್ಕಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತೀಕ್ಷ್ಣವಾಗಿ ಹೇಳಿದ್ದಾರೆ. ಆಪರೇಷನ್ ಕಮಲಕ್ಕೆ ಬಿಜೆಪಿ ಯತ್ನಿಸುತ್ತಿದೆ ಎಂಬ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಯಡಿಯೂರಪ್ಪ ಈ ತಿರುಗೇಟು ನೀಡಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ನಾವು ಯಾವುದೇ ರೀತಿಯಲ್ಲೂ ಬೇರೆ ಪಕ್ಷಗಳ ಶಾಸಕರನ್ನು ಸೆಳೆಯಲು ಪ್ರಯತ್ನ ಮಾಡುತ್ತಿಲ್ಲ. ನಮಗದರ ಅಗತ್ಯವೂ ಇಲ್ಲ ಎಂದು ಸ್ಪಷ್ಟಪಡಿಸಿದರು. ನಾವು ಈಗ ವಿರೋಧ ಪಕ್ಷದ ಸ್ಥಾನದಲ್ಲಿದ್ದೇವೆ. ಇಲ್ಲಿ ಕುಳಿತೇ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟ ನಡೆಸುತ್ತೇವೆ. 

ಗುರುವಾರದಿಂದ ಪಕ್ಷದ ನಾಯಕರ 3  ತಂಡಗಳು ರಾಜ್ಯ ಪ್ರವಾಸ ಆರಂಭಿಸಲಿದ್ದು, ರಾಜ್ಯ ಸರ್ಕಾರದ ವೈಫಲ್ಯಗಳ ಕುರಿತು ಜನರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡುತ್ತೇವೆ. ಜತೆಗೆ ಸರ್ಕಾರದ ವೈಫಲ್ಯಗಳು ಏನೇನು ಎಂಬುದನ್ನು ಆಳವಾಗಿ ತಿಳಿದುಕೊಳ್ಳುತ್ತೇವೆ. ನಂತರ ಮುಂದಿನ ಹೋರಾಟ ರೂಪಿಸುತ್ತೇವೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bengaluru: ಕಂಡೋರ ಹೆಂಡ್ತಿಯನ್ನು ಪಟಾಯಿಸಿದ ಪೊಲೀಸಪ್ಪ; ಇದು ರೀಲ್ಸ್ ಅಂಟಿಯ ಮೋಹದ ಕಥೆ
ಬೆಂಗಳೂರಿನಲ್ಲಿ ಜಿಮ್‌ಗೆ ಹೋದ್ರೆ, ಚಿಕನ್‌ ತಿಂದ್ರೆ ಮ್ಯಾನೇಜರ್‌ ನಗ್ತಾರೆ: NRI ಪೋಸ್ಟ್‌ನಿಂದ ಆಘಾತಕಾರಿ ಸತ್ಯ ಬಯಲು!