ರಾಮುಲು, ನಾನು ಹೆಬ್ಬೆಟ್ಟಲ್ಲ: ಜೆ. ಶಾಂತಾ

Published : Oct 31, 2018, 09:05 AM IST
ರಾಮುಲು, ನಾನು ಹೆಬ್ಬೆಟ್ಟಲ್ಲ: ಜೆ. ಶಾಂತಾ

ಸಾರಾಂಶ

ರಾಜ್ಯದಲ್ಲಿ ಉಪ ಚುನಾವಣೆಯ ಕಣಗಳು ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ರಂಗೇರುತ್ತಿದ್ದು ಈ ನಿಟ್ಟಿನಲ್ಲಿ ಆರೋಪ ಪ್ರತ್ಯಾರೋಪಗಳು ಹೆಚ್ಚಾಗಿವೆ. ಇದೀಗ ಬಿಜೆಪಿ ಅಭ್ಯರ್ಥಿ ಜೆ. ಶಾಂತಾ ಕಾಂಗ್ರೆಸ್ ಮುಖಂಡರು ತಿರುಗೇಟು ನೀಡಿದ್ದಾರೆ. 

ಹೂವಿನಹಡಗಲಿ :  ಕಾಂಗ್ರೆಸ್‌ ಆರೋಪಿಸುವಂತೆ ನಾನಾಗಲಿ, ಶಾಸಕ ಶ್ರೀರಾಮುಲು ಆಗಲಿ ಹೆಬ್ಬೆಟ್ಟಲ್ಲ (ಅವಿದ್ಯಾವಂತರಲ್ಲ). ಇಬ್ಬರೂ ಶಿಕ್ಷಣ ಪಡೆದಿದ್ದೇವೆ. ವಿದ್ಯಾವಂತರಾಗಿದ್ದೇವೆ. ಕಾಂಗ್ರೆಸ್‌ ಮುಖಂಡರು ಬಾಯಿ ಮೇಲೆ ಬೆರಳು ಇಟ್ಟುಕೊಳ್ಳುವ ರೀತಿಯಲ್ಲಿ ಕನ್ನಡ ಭಾಷೆ ಮಾತನಾಡುತ್ತೇವೆ ಬಿಜೆಪಿ ಅಭ್ಯರ್ಥಿ ಜೆ. ಶಾಂತಾ ತಿರುಗೇಟು ನೀಡಿದ್ದಾರೆ. 

ಸುದ್ದಿಗಾರರ ಜತೆ ಮಾತನಾಡಿದ ಅವರು, ನಮ್ಮ ಮನೆಯಲ್ಲಿ ನಮಗೆ ಸಂಸ್ಕಾರ ನೀಡಿದ್ದಾರೆ. ಬಳ್ಳಾರಿಯಲ್ಲೇ ಇದ್ದು ಈ ನೆಲದ ಮಗಳಾಗಿದ್ದೇನೆ. ನಮ್ಮ ಬಗ್ಗೆ ಆರೋಪ ಮಾಡುವ ನೈತಿಕತೆ ಕಾಂಗ್ರೆಸ್‌ಗೆ ಇಲ್ಲ. ಸೋಲಿನ ಭಯದಿಂದ ಅವರು ಹತಾಶರಾಗಿದ್ದಾರೆ ಎಂದು ಹೇಳಿದರು. ರಾಮುಲುಗೆ ಕನ್ನಡವೇ ಗೊತ್ತಿಲ್ಲ ಎಂದು ಕಾಂಗ್ರೆಸ್ಸಿಗರು ಇತ್ತೀಚೆಗೆ ಟೀಕಿಸಿದ್ದರು. ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೆ. ಶಾಂತಾ, ಕೈ ಮುಖಂಡರ ಆರೋಪಗಳಿಗೆ ತಿರುಗೇಟು ನೀಡಿದರು.

ಪಟ್ಟಣದಲ್ಲಿ ಸೋಮವಾರ ರಾತ್ರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಈ ವರೆಗೂ ಯಾವ ಪಕ್ಷದ ನಾಯಕರ ಬಗ್ಗೆ ಹಗುರವಾಗಿ ಮಾತನಾಡಿಲ್ಲ. ಸಚಿವ ಡಿ.ಕೆ.ಶಿವಕುಮಾರ ರೀತಿಯಲ್ಲಿ ಶ್ರೀರಾಮುಲು ಅಣ್ಣ ಎಂಬ ಇತ್ಯಾದಿ ಶಬ್ದಗಳಿಂದ ಹಂಗಿಸುವ ಗೋಜಿಗೆ ಹೋಗಿಲ್ಲ. ಬಳ್ಳಾರಿ ಜನ ನೇರವಾಗಿ ಮಾತನಾಡುತ್ತೇವೆಂದು ಹೇಳಿದರು.

ಕಾಂಗ್ರೆಸ್‌ ಅಡ್ಡಗಾಲು

2009ರಲ್ಲಿ ರಾಜ್ಯದಿಂದ ಏಕೈಕ ಸಂಸದೆಯಾಗಿದ್ದ ನನಗೆ ಕಾಂಗ್ರೆಸ್‌ ನಿನ್ನ ಕುಲಕಸುಬು ಏನು? ಎಂದು ಪ್ರಶ್ನಿಸಿ ಜಾತಿನಿಂದನೆ ಮಾಡಿದ್ದರು. ಅಲ್ಲದೆ ಅಭಿವೃದ್ಧಿಗೆ ಅಡ್ಡಗಾಲು ಹಾಕಿದ್ದರು ಎಂದು ಆರೋಪಿಸಿದರು.

ಸಂಸದೆಯಾಗಿ ಆಯ್ಕೆಯಾಗಿದ್ದ ಸಂದರ್ಭದಲ್ಲಿ ನ್ಯಾಯಾಲಯದ ಮೂಲಕ ಒಂದೂವರೆ ವರ್ಷ ಸಂಸತ್ತಿನಿಂದ ಹೊರಗಿಟ್ಟು, ನನಗೆ ಸಾಕಷ್ಟುಮಾನಸಿಕ ಕಿರುಕುಳ ನೀಡಲಾಗಿತ್ತು. ಜತೆಗೆ ಬಂದ ಅನುದಾನವನ್ನು ಬಳಕೆ ಮಾಡಲು ಕಾಂಗ್ರೆಸ್ಸಿಗರು ಬಿಡಲಿಲ್ಲ. ಇದೀಗ ನನ್ನ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

5 ಸಾವಿರ ಕೊಡ್ತೀನಿ ರೂಮ್‌ಗೆ ಬಾ ಅಂದ್ರು? ಬ್ರಹ್ಮಾನಂದ ಗುರೂಜಿಯ ವಿಡಿಯೋ ವೈರಲ್
ಬೆಂಗಳೂರಿಗಾಗಿ ಶ್ರಮಿಸಿದೆವು ಆದ್ರೂ ತಮ್ಮನನ್ನು ಸೋಲಿಸಿದ್ರಿ: ಅಪಾರ್ಟ್‌ಮೆಂಟ್‌ ನಿವಾಸಿಗಳ ವಿರುದ್ಧ ಕಿಡಿಯಾದ ಡಿಕೆಶಿ