
ಉಡುಪಿ(ಜೂ.28): ಉಡುಪಿಯಲ್ಲಿ ನವೆಂಬರ್ ತಿಂಗಳಲ್ಲಿ ನಡೆಯುವ ವಿಶ್ವ ಸಂತರ ಸಮ್ಮೇಳನದಲ್ಲಿ, ಆಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ಚಾಲನೆ ನೀಡುವ ಬಗ್ಗೆ ಈಗಲೇ ಯಾವುದೇ ನಿರ್ಣಯ ಆಗಿಲ್ಲ. ಸಂಸದ ಸಾಕ್ಷೀ ಮಹಾರಾಜ್ ಅವರೊ ಬ್ಬರೇ ಆ ನಿರ್ಣಯ ತೆಗೆದು ಕೊಳ್ಳುವುದಕ್ಕೆ ಆಗುವುದಿಲ್ಲ ಎಂದು ಪೇಜಾವರ ಶ್ರೀಗಳು ಸ್ಪಷ್ಟಪಡಿಸಿದ್ದಾರೆ.
ಸೋಮವಾರ ಸಾಕ್ಷೀ ಮಹಾರಾಜ್ ಅವರು ಉಡುಪಿ ಯಲ್ಲಿ ನಡೆಯುವ ಸಂತರ ಸಮ್ಮೇಳನದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಉತ್ತರ ಪ್ರದೇಶದಲ್ಲಿ ನೀಡಿದ ಹೇಳಿಕೆಗೆ ಸಂಬಂಧಿಸಿ ಪೇಜಾವರ ಶ್ರೀಗಳು ಈ ಪ್ರತಿಕ್ರಿಯೆ ನೀಡಿದ್ದಾರೆ.
ಸಾಕ್ಷಿ ಮಹಾರಾಜ್ ಇತ್ತೀಚೆಗೆ ಉಡುಪಿಗೆ ಆಗಮಿಸಿ ಮಾತುಕತೆ ನಡೆಸಿದ್ದರು. ಈ ವೇಳೆ ರಾಮಮಂದಿರದ ನಿರ್ಮಾಣ ಬಗ್ಗೆ ಅವರು ಮಾತನಾಡಿದ್ದು ಹೌದು. ಆದರೆ ಹಿಂದಿಯಲ್ಲಿ ಮಾತನಾಡಿದ್ದರಿಂದ ನನಗೆ ಸ್ಪಷ್ಟವಾಗಿ ಅರ್ಥ ಆಗಲಿಲ್ಲ ಎಂದು ಶ್ರೀಗಳು ತಿಳಿಸಿದರು. ‘ಈ ಬಾರಿಯ ಸಂತ ಸಮ್ಮೇಳನದಲ್ಲಿ ರಾಮಮಂದಿರಕ್ಕೆ ಮಹೂರ್ತ ಮಾಡುವ ಬಗ್ಗೆ ಈಗಲೇ ನಿರ್ಣಯ ತೆಗೆದುಕೊಳ್ಳಲಾಗುವುದಿಲ್ಲ, ಈ ಬಗ್ಗೆ ಸಾಕ್ಷೀ ಮಹಾರಾಜ್ ಅವರೊಬ್ಬರೇ ನಿರ್ಣಯ ತೆಗೆದುಕೊಳ್ಳುವುದಕ್ಕಾಗುವುದಿಲ್ಲ. ರಾಮಮಂದಿರ ನಿರ್ಮಾಣಕ್ಕೆ ಸಮಿತಿ ಇದೆ, ಅಲ್ಲಿ ಮೊದಲು ನಿರ್ಣಯ ಆಗಬೇಕು. ಸಂವಿಧಾನ, ಕಾನೂನು, ರಾಜ್ಯಸಭೆ, ಲೋಕಸಭೆಯಲ್ಲಿ ತೀರ್ಮಾನ ಆಗಬೇಕು, ಅದ್ಯಾವುದೂ ನಡೆಯದೇ ನಾನು ಏನನ್ನೂ ಹೇಳಲಾರೆ' ಎಂದು ಪೇಜಾವರ ಶ್ರೀಗಳು ಸ್ಪಷ್ಟನೆ ನೀಡಿದರು.
ನಮ್ಮ 3ನೇ ಪರ್ಯಾಯದಲ್ಲಿ ಉಡುಪಿಯಲ್ಲಿ ಧಾರ್ಮಿಕ ಸಂಸತ್ತು ಆಗಿತ್ತು. ಆಗ ರಾಮಮಂದಿರದ ಬಗ್ಗೆ ಚರ್ಚೆ ಆಗಿತ್ತು. ಮಂದಿರ ಪ್ರವೇಶಕ್ಕೆ ಸರ್ಕಾರ ಅವಕಾಶ ನೀಡದಿದ್ದರೆ, ಅದರ ಬೀಗವನ್ನು ಒಡೆದು ಒಳಗೆ ಪ್ರವೇಶಿಸುವ ನಿರ್ಧಾರ ಮಾಡಲಾಗಿತ್ತು. ಆದರೆ ಅಂತಹ ಅಗತ್ಯವೇ ಬರಲಿಲ್ಲ. ಆಗಿನ ಪ್ರಧಾನಿ ರಾಜೀವ್ ಗಾಂಧಿ ಅವರೇ ಮಂದಿರದ ಬೀಗ ತೆಗೆಸಿದ್ದರು ಎಂದು ಶ್ರೀಗಳು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.