
ಚಿಕ್ಕಬಳ್ಳಾಪುರ(ಸ.03): ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಮಾಡಿದವರ ಸ್ಪಷ್ಟ ಸುಳಿವು ಎಸ್‌ಐಟಿ ತಂಡಕ್ಕೆ ಸಿಕ್ಕಿದ್ದು, ಶೀಘ್ರದಲ್ಲೇ ಹಂತಕರ ಬಂಧನವಾಗಲಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿದ್ದು ಯಾರು ಮತ್ತು ಯಾಕೆ ಎಂಬ ವಿಚಾರ ಸ್ಪಷ್ಟವಾಗಿದೆ. ಆದರೆ, ಆ ಕುರಿತು ಈಗಲೇ ಮಾಧ್ಯಮಕ್ಕೆ ಎಲ್ಲಾ ವಿವರಗಳನ್ನು ಬಹಿರಂಗಪಡಿಸಲಾಗದು.
ಹತ್ಯೆಗೆ ಸಂಬಂಧಿಸಿ ಸೂಕ್ತ ಸಾಕ್ಷ್ಯಾಧಾರ ಗಳನ್ನು ಕಲೆ ಹಾಕುವಲ್ಲಿ ಎಸ್'ಐಟಿ ತಂಡ ನಿರತವಾಗಿದೆ. ಸೂಕ್ತ ಪುರಾವೆಗಳನ್ನು ಸಂಗ್ರಹಿಸದೆ ಆರೋಪಿಗಳನ್ನು ಬಂಧಿಸಿದರೆ ಪ್ರಕರಣ ಬಿದ್ದುಹೋಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.