ಐಟಿ ದಾಳಿಗೆ ನಾವು ಹೆದರಲ್ಲ: ಸಿಎಂ

Published : Aug 10, 2017, 10:19 PM ISTUpdated : Apr 11, 2018, 01:00 PM IST
ಐಟಿ ದಾಳಿಗೆ ನಾವು ಹೆದರಲ್ಲ: ಸಿಎಂ

ಸಾರಾಂಶ

ಬಿಜೆಪಿಯವರು ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡು ಐಟಿ ದಾಳಿ ನಡೆಸುತ್ತಿದ್ದಾರೆ. ಇದಕ್ಕೆಲ್ಲ ನಾವು ಹೆದರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರು (ಆ.10): ಬಿಜೆಪಿಯವರು ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡು ಐಟಿ ದಾಳಿ ನಡೆಸುತ್ತಿದ್ದಾರೆ. ಇದಕ್ಕೆಲ್ಲ ನಾವು ಹೆದರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಐಟಿ ದಾಳಿಯಲ್ಲಿ ಯಾವುದೇ ವಿಶೇಷವಿಲ್ಲ. ಐಟಿ ರಿಟರ್ನ್ ಸಲ್ಲಿಕೆ ಮಾಡಿರುವುದು ಸರಿ ಇದೆಯೋ, ಇಲ್ಲವೊ ಎಂಬುದನ್ನು ಪರಿಶೀಲಿಸುತ್ತಾರೆ. ಆದರೆ ಬಿಜೆಪಿಯವರು ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡು ಐಟಿ ದಾಳಿ ನಡೆಸುತ್ತಿರುವುದು ಸರಿಯಲ್ಲ. ಇದಕ್ಕೆ ನಾವು ಹೆದರವುದೂ ಇಲ್ಲ ಎಂದರು. ಕೆರೆಗಳ ಡಿನೋಟಿಫಿಕೇಷನ್ ವಿಷಯ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ಸಭೆಯೊಂದರಲ್ಲಿ ಚರ್ಚೆ ನಡೆಸುವಾಗ ಕೆರೆಯಾಗಿಯೂ ಬಳಕೆ ಆಗದಿರುವ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ, ಕೆಲ ಕೆರೆ ಅಂಗಳದಲ್ಲಿ ತಲೆ ಎತ್ತಿರುವ ಸ್ಲಮ್‌ಗಳು ಇಂದಿಗೂ ಕಂದಾಯ ಇಲಾಖೆ ಕಡತದಲ್ಲಿ ಕೆರೆ ಎಂದೇ ದಾಖಲಾಗಿದೆ. ಅದನ್ನು ತೆಗೆದು ಹಾಕಬೇಕು ಎಂದು ಹೇಳಿದ್ದೇನೆಯೇ ಹೊರತು ಎಲ್ಲೂ ಡಿನೋಟಿಫಿಕೇಷನ್ ಮಾಡುವುದಾಗಿ ಹೇಳಿಲ್ಲ. ಆದರೆ ಪ್ರತಿಪಕ್ಷಗಳು ಅದನ್ನೇ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಅವರು ಟೀಕಿಸಿದರು.

ಸದ್ಯದಲ್ಲೇ ವಿಸ್ತರಣೆ: 

ಸಚಿವ ಸಂಪುಟವನ್ನು ಸದ್ಯದಲ್ಲೇ ವಿಸ್ತರಿಸಬೇಕು. ಚುನಾವಣೆ ಇನ್ನೂ ದೂರದಲ್ಲಿದೆ. ಏಪ್ರಿಲ್ ಅಥವಾ ಮೇನಲ್ಲಿ ಚುನಾವಣೆ ನಡೆಯಲಿದೆ ಎಂದರು. ನಾಡಹಬ್ಬ ದಸರಾ ಮಹೋತ್ಸವವನ್ನು ಯಾರು ಉದ್ಘಾಟಿಸುತ್ತಾರೆ ಎಂಬುದನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಆ.12 ರಂದು ಪ್ರಕಟಿಸುತ್ತಾರೆ ಎಂದು ಇದೇ ವೇಳೆ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವೀಕ್ ಡೇಸಲ್ಲಿ ಫ್ರೊಫೆಸರ್, ವೀಕೆಂಡ್‌ನಲ್ಲಿ ಖತರ್ನಾಕ್ ಕಳ್ಳಿ! ಮದುವೆ ಮನೆಗಳಲ್ಲಿ ಕನ್ನ ಹಾಕುತ್ತಿದ್ದ ಶಿಕ್ಷಕಿ!
2026 Holiday Calendar:ಮುಂದಿನ ವರ್ಷ ಕುಟುಂಬದ ಜೊತೆ ಟ್ರಿಪ್ ಹೋಗೋಕೆ ಇಲ್ಲಿದೆ ಬೆಸ್ಟ್ ಲೀವ್ ಪ್ಲಾನ್!