
ನವದೆಹಲಿ (ಜೂ.09): ಪ್ರಮುಖ ವಿಚಾರಗಳ ಬಗ್ಗೆ ಉಭಯ ದೇಶಗಳ ನಿಲುವನ್ನು ಪರಸ್ಪರರು ಗೌರವಿಸಬೇಕು. ವಿವಾದಗಳನ್ನು ಸೌಹಾರ್ದಯುತ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಚೀನಾದ ಅಧ್ಯಕ್ಷರನ್ನು ಭೇಟಿಯಾದ ಸಂದರ್ಭದಲ್ಲಿ ಹೇಳಿದ್ದಾರೆ.
ಚೀನಾ ಪಾಕಿಸ್ತಾನ ಎಕನಾಮಿಕ್ ಕಾರಿಡಾರ್ (ಸಿಪಿಇಸಿ) ಪರಮಾಣು ಪೂರೈಕೆ ಒಪ್ಪಂದ (ಎನ್’ಎಸ್’ಜಿ) ವಿಚಾರಗಳ ಬಗ್ಗೆ ಎರಡೂ ದೇಶಗಳೂ ಮಾತುಕತೆ ನಡೆಸಿ ಬಗೆಹರಿಸಿಕೊಳ್ಳಬೇಕು ಎಂದು ನರೇಂದ್ರ ಮೋದಿ ಪುನರುಚ್ಛರಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಷಿ ಜಿಂಪಿಂಗ್ ಇಂದು ಭೇಟಿ ಮಾಡಿದ್ದಾರೆ. ಶಾಂಗೈಯ್ ಸಹಕಾರ ಸಂಘಟನೆಯಲ್ಲಿ 50 ಬಿಲಿಯನ್ ವೆಚ್ಚದ ಚೀನಾ-ಪಾಕಿಸ್ತಾನ ಎಕನಾಮಿಕ್ ಕಾರಿಡಾರ್ ವಿಚಾರವನ್ನು ಹೈಲೈಟ್ ಮಾಡಿದ್ದಾರೆ.
ಶಾಂಘೈಯ್ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಚೀನಾ ನೀಡಿದ ಬೆಂಬಲಕ್ಕೆ ಭಾರತ ಕೃತಜ್ಞತೆ ಸಲ್ಲಿಸುತ್ತದೆ ಎಂದು ಮೋದಿ ಹೇಳಿದ್ದಾರೆ.
ಭೇಟಿಯ ಸಂದರ್ಭದಲ್ಲಿ ಚೀನಾ ಅಧ್ಯಕ್ಷ ಷಿ ಅವರು, ಪ್ರಧಾನಿ ನರೇಂದ್ರ ಮೋದಿಗೆ ಬಹುಪಕ್ಷೀಯ ವಿಚಾರಗಳಲ್ಲಿ ಉಭಯ ದೇಶಗಳು ಸಂಪರ್ಕವನ್ನು, ಸಂವಹನವನ್ನು ಹೆಚ್ಚಿಸಿಕೊಳ್ಳಬೇಕು. ಸೂಕ್ಷ್ಮ ವಿಚಾರಗಳನ್ನು , ವಿವಾದಗಳನ್ನು ಸೂಕ್ತ ರೀತಿಯಲ್ಲಿ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.