ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರ ಮಾಡುವ ಗುರಿ: ಆಸಿಯಾನ್’ನಲ್ಲಿ ಪ್ರಧಾನಿ ಮೋದಿ

Published : Nov 13, 2017, 07:52 PM ISTUpdated : Apr 11, 2018, 12:44 PM IST
ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರ ಮಾಡುವ ಗುರಿ: ಆಸಿಯಾನ್’ನಲ್ಲಿ ಪ್ರಧಾನಿ ಮೋದಿ

ಸಾರಾಂಶ

ನಮ್ಮ ಸರ್ಕಾರವು ಭಾರತವನ್ನು ಜಾಗತಿಕ ನಕ್ಷೆಯಲ್ಲಿ ಉತ್ಪಾದನಾ ಕೇಂದ್ರವನ್ನಾಗಿ ಮಾಡಬಯಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮನಿಲಾ, ಫಿಲಿಪೈನ್ಸ್: ನಮ್ಮ ಸರ್ಕಾರವು ಭಾರತವನ್ನು ಜಾಗತಿಕ ನಕ್ಷೆಯಲ್ಲಿ ಉತ್ಪಾದನಾ ಕೇಂದ್ರವನ್ನಾಗಿ ಮಾಡಬಯಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಆಸಿಯಾನ್’ನಲ್ಲಿ ವಾಣಿಜ್ಯ ಮತ್ತು ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಮೋದಿ, ನಾವು ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿ ಮಾಡಬಯಸುತ್ತೇವೆ. ನಮ್ಮ ಯುವಜನರು ಉದ್ಯೋಗ ಸೃಷ್ಟಿಸುವವರಾಗಬೇಕು, ಎಂದು ಹೇಳಿದ್ದಾರೆ.

ಆಸಿಯಾನ್ ದೇಶಗಳ ಉದ್ಯಮಿಗಳನ್ನು ಭಾರತದಲ್ಲಿ ಹೂಡಿಕೆ ಮಾಡಲು ಆಹ್ವಾನಿಸಿದ ಮೋದಿ, ದೇಶದ ಬಹುತೇಕ ವಲಯಗಳು ವಿದೇಶಿ ಹೂಡಿಕೆಗೆ ಮುಕ್ತವಾಗಿವೆ ಎಂದು ಈ ಸಂದರ್ಭದಲ್ಲಿ ಹೇಳಿದ್ದಾರೆ.

ಭಾರತ  ಹಿಂದಿಗಿಂತಲೂ ಹೆಚ್ಚು ವೇಗದಲ್ಲಿ ಪರಿವರ್ತನೆಯಾಗುತ್ತಿದೆ.  ಸರಳ, ಪರಿಣಾಮಕಾರಿ ಹಾಗೂ ಪಾರದರ್ಶಕ ಆಡಳಿತ ಹೊಂದಲು ನಾವು ಹಗಲು ರಾತ್ರಿ ಶ್ರಮಿಸುತ್ತಿದ್ದೇವೆ. ಡಿಜಿಟಲ್ ವ್ಯವಹಾರಗಳು ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಜನರನ್ನು ತಲುಪಲು ನಾವು ತಂತ್ರಜ್ಞಾನವನ್ನು ಹೆಚ್ಚೆಚ್ಚು ಬಳಸುತ್ತಿದ್ದೇವೆ ಎಂದು ಮೋದಿ ಹೇಳಿದ್ದಾರೆ.

ಬಹಳಷ್ಟು ಮಂದಿಗೆ ಬ್ಯಾಂಕಿಂಗ್ ಸೇವೆ ಲಭ್ಯವಾಗಿರಲ್ಲಿಲ್ಲ. ಆದರೆ ಜನ-ಧನ ಯೋಜನೆಯನ್ನು ಜಾರಿಗೆ ತಂದ ನಂತರ ಮಿಲಿಯನ್’ಗಟ್ಟಲೆ ಜನರ ಜೀವನ ಬದಲಾಗಿದೆ, ಎಂದು ಪ್ರಧಾನಿ ಹೇಳಿದ್ದಾರೆ.    

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

8ನೇ ಕ್ಲಾಸ್ ಹುಡುಗಿ ಮೇಲೆ ಬಲತ್ಕಾರ, ಬೆದರಿಸಿ ಚಿನ್ನ ದೋಚಿದ್ದ 10ನೇ ಕ್ಲಾಸ್ ಹುಡುಗ ಅರೆಸ್ಟ್
ಬಿಜೆಪಿ ನಾಯಕನ ಸಂಬಂಧಿ 17ರ ಯುವಕನಿಗೆ ಚೂರಿ ಇರಿದು ಕೊಂದ ದುಷ್ಕರ್ಮಿಗಳು!