ಕನ್ನಡದ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಸಹಿಸಲ್ಲ: ಸಿಎಂ ಸ್ಪಷ್ಟನುಡಿ

Published : Sep 17, 2019, 07:57 AM ISTUpdated : Sep 17, 2019, 10:26 AM IST
ಕನ್ನಡದ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಸಹಿಸಲ್ಲ: ಸಿಎಂ ಸ್ಪಷ್ಟನುಡಿ

ಸಾರಾಂಶ

ಕನ್ನಡದ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಸಹಿಸಲ್ಲ| ಸಿಎಂ ಯಡಿಯೂರಪ್ಪ ತೀಕ್ಷ್ಣ ಹೇಳಿಕೆ

ಬೆಂಗಳೂರು[ಸೆ.17]: ಕನ್ನಡ ಭಾಷೆಯ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವ ಪ್ರಯತ್ನವನ್ನೂ ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತೀಕ್ಷ$್ಣವಾಗಿ ಹೇಳಿದ್ದಾರೆ.

ಅತ್ತ ದೇಶಕ್ಕೊಂದೇ ಭಾಷೆ ಎಂದ ಶಾ: ಇತ್ತ ಹಿಂದಿ ದಿನ ಆಚರಣೆಗೆ ಸಿದ್ದು ವಿರೋಧ!

ಈ ಬಗ್ಗೆ ಸೋಮವಾರ ಟ್ವೀಟ್‌ ಮೂಲಕ ಹೇಳಿಕೆ ನೀಡಿರುವ ಅವರು, ಭಾರತೀಯ ಸಂವಿಧಾನ ಅಂಗೀಕರಿಸಿದ ಭಾಷೆಗಳಲ್ಲಿ ಯಾವುದೇ ತಾರತಮ್ಯ ಸಲ್ಲದು. ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಅಧಿಕೃತ ಭಾಷೆ ಮತ್ತು ಕನ್ನಡ ಭಾಷೆಯ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವ ಪ್ರಯತ್ನವನ್ನೂ ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ಖಡಕ್‌ ಆಗಿ ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಹಿಂದಿ ಭಾಷೆಗೆ ಸಂಬಂಧಿಸಿದಂತೆ ಒಂದು ದೇಶ-ಒಂದು ಭಾಷೆ ಬಗ್ಗೆ ನೀಡಿದ ಹೇಳಿಕೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರತಿಪಕ್ಷಗಳು ಹಾಗೂ ವಿವಿವಧ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸ್ಪಷ್ಟಹೇಳಿಕೆ ನೀಡಿದ್ದಾರೆ.

ಒಂದು ದೇಶ, ಒಂದೇ ಭಾಷೆ: ಹಿಂದಿ ರಾಷ್ಟ್ರೀಯ ಭಾಷೆಯಾಗಿಸಲು ಶಾ ಮನವಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು