
ರಾಯಚೂರು: ಉಡುಪಿಯಲ್ಲಿ ಜೂ.13 ರಂದು ಇಫ್ತಾರ್ ಕೂಟ ಆಯೋಜಿಸಲು ಚಿಂತಿಸಲಾಗಿದೆ ಎಂದು ಪೇಜಾವರ ಮಠದ ಪೀಠಾಧಿಪತಿ ವಿಶ್ವೇಶ ತೀರ್ಥ ಶ್ರೀಗಳು ತಿಳಿಸಿದರು. ಮಂತ್ರಾಲಯದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಇಫ್ತಾರ್ ಕೂಟ ಆಯೋಜನೆ ಬಗ್ಗೆ ಯಾವುದೇ ಮಠದ ವಿರೋಧವಿಲ್ಲ.
ಆದರೆ ಇಫ್ತಾರ್ ಕುರಿತು ಮುಸ್ಲಿಂ ಸಮುದಾಯದವರಲ್ಲಿ ಸಂಕೋಚ ಮನೋಭಾವನೆ ಇದ್ದು, ಈ ಕುರಿತು ಅವರ ಜೊತೆ ಚರ್ಚಿಸಲಾಗುವುದು ಎಂದರು.
ಪ್ರಧಾನಿ ಅವರ ಆಡಳಿತ ವೈಖರಿ ಬಗ್ಗೆ ಅಸಮಾಧಾನವಿಲ್ಲ. ಆದರೆ, ಮೋದಿ ಚುನಾವಣೆ ಪೂರ್ವದಲ್ಲಿ ಕಪ್ಪು ಹಣ ತರಲಾಗುವುದು ಹಾಗೂ ಗಂಗಾ ನದಿ ಶುದ್ಧೀಕರಣಗೊಳಿಸಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ, ಎರಡೂ ಕೆಲಸಗಳನ್ನು ಮಾಡಿಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.