
ನವದೆಹಲಿ (ಮಾ.24): ತಂತ್ರಗಾರಿಕೆ ಮೂಲಕ ಚುನಾವಣೆ ಗೆಲ್ಲಬೇಕೇ ವಿನಾ ಮಾತಿನಿಂದಲ್ಲ. ಬಿಜೆಪಿ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, 2019ರಲ್ಲಿ ಜಯ ನಮ್ಮದೇ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಬಿಜೆಪಿ ಸಂಸದೀಯ ಪಕ್ಷದ ಸಭೆ ಉದ್ದೇಶಿಸಿ ಶುಕ್ರವಾರ ಸಂಜೆ ಮಾತನಾಡಿದ ಅವರು, ಪಕ್ಷವು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವಂತಾಗಲು ಸರ್ಕಾರದ ಸಾಧನೆಗಳನ್ನು ಜನರ ಮುಂದೆ ಸಂಸದರು ತೆರೆದಿಡಬೇಕು ಎಂದು ಕರೆ ನೀಡಿದರು.
ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಸಂಸದರು ಸುದ್ದಿಗೋಷ್ಠಿ ನಡೆಸಿ ಸರ್ಕಾರದ ಸಾಧನೆಗಳನ್ನು ತೆರೆದಿಡಬೇಕು. ಪ್ರತಿಪಕ್ಷಗಳು ಸಂಸತ್ ಕಲಾಪಕ್ಕೆ ಅಡ್ಡಿ ಮಾಡಿ ಕುತಂತ್ರ ನಡೆಸುತ್ತಿವೆ ಎಂಬುದನ್ನು ಜನರಲ್ಲಿ ಮದನಟ್ಟು ಮಾಡಬೇಕು. ವಿಪಕ್ಷಗಳ ಕುತಂತ್ರಗಳನ್ನು ಬಯಲು ಮಾಡಲು ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.