
ಶಿರಾಳಕೊಪ್ಪ: ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಸ್ ಪರಸ್ಪರ ಪ್ರತ್ಯಾರೋಪದಲ್ಲಿ ತೊಡಗಿವೆ. ಒಂದೆಡೆ ಕುಮಾರಸ್ವಾಮಿ ತಾವು 5 ವರ್ಷ ಮುಖ್ಯಮಂತ್ರಿ ಎಂದು ಹೇಳುತ್ತಾರೆ.
ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದು ಅವರ ಬೆಂಬಲಿಗರು ಹೇಳುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ಗೊಂದಲ ಉಂಟಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇವರ ಕಿತ್ತಾಟ ನಮಗೆ ವರವಾಗಲಿದೆ. ಲೋಕಸಭೆಯಲ್ಲಿ 22 ಸ್ಥಾನ ಗೆದ್ದೇ ಗೆಲ್ಲುತ್ತೇವೆ, ಇದರಲ್ಲಿ ಅನುಮಾನವಿಲ್ಲ. ಹಾಗೆಯೇ ರಾಜ್ಯದಲ್ಲಿ ನಡೆಯುತ್ತಿರುವ ಎರಡು ಉಪಚುನಾವಣೆಯಲ್ಲಿಯೂ ಬಿಜೆಪಿ ಗೆಲುವು ನಿಶ್ಚಿತ. ನಂತರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆ ಆಗಲಿದೆ ಎಂದು ಸುಳಿವು ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.