
ವಿಯೇಟ್ನಾಂ : ಮದುವೆಗೆಂದು ತೆರಳುತ್ತಿದ್ದ ಮಿನಿ ಬಸ್ ಒಂದು ಕಂಟೈನರ್ ಗೆ ಡಿಕ್ಕಿಯಾಗಿ ವರ ಸೇರಿ 13 ಮಂದಿ ಸಾವನ್ನಪ್ಪಿರುವ ಘಟನೆ ಕೇಂದ್ರೀಯ ವಿಯೇಟ್ನಾಂನಲ್ಲಿ ನಡೆದಿದೆ.
ಬಸ್ ನಲ್ಲಿ ವರ ಹಾಗೂ ಆತನ ಕುಟುಂಬಸ್ಥರು ಪ್ರಯಾಣಿಸುತ್ತಿದ್ದರು ಈ ವೇಳೆ ಕ್ವಾಂಗ್ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ.
10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಮೂವರು ಆಸ್ಪತ್ರೆಗೆ ಸಾದಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಈ ವೇಳೆ ಡ್ರೈವರ್ ಸೇರಿದಂತೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ವಿಯೆಟ್ನಾಂನಲ್ಲಿ ಇಂತಹ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಇದಕ್ಕೆ ರಸ್ತೆ ಸುರಕ್ಷತಾ ನಿಯಮಗಳ ಕಟ್ಟು ನಿಟ್ಟಾಗಿಲ್ಲದಿರುವುದೇ ಕಾರಣವಾಗಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.