
ದುಬೈ : ಪಶ್ಚಿಮ ಏಷ್ಯಾ ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ದುಬೈಗೆ ಭೇಟಿ ನೀಡಿದ್ದು, ಭಾನುವಾರ ಇಲ್ಲಿ ನೆಲೆಸಿರುವ ಭಾರತೀಯರನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ.
ನೀವು ಭಾರತದ ಪ್ರತೀ ಭಾಗವನ್ನೂ ಕೂಡ ಪ್ರತಿನಿಧಿಸುತ್ತೀರಾ. ಭಾರತ ಈಗ ಅಭಿವೃದ್ಧಿಯನ್ನು ಸಾಧಿಸುತ್ತಿರುವ ದೇಶವಾಗಿದೆ. ವ್ಯಾವಹಾರಿಕ ಕ್ಷೇತ್ರದಲ್ಲಿಯೂ ಸಾಕಷ್ಟು ಪ್ರಮಾಣದಲ್ಲಿ ಪ್ರಗತಿಯನ್ನು ಸಾಧಿಸುತ್ತಿದೆ ಎಂದು ಹೇಳಿದ್ದಾರೆ.
ಅಲ್ಲದೇ ನಿಮ್ಮ ಕನಸುಗಳನ್ನು ಸಾಕಾರಗೊಳಿಸುವ ಸಲುವಾಗಿ ಸರ್ಕಾರ ಕಾರ್ಯಪೃವೃತ್ತವಾಗಿದೆ ಎಂದು ಪ್ರಧಾನಿ ಈ ವೇಳೆ ಹೇಳಿದ್ದಾರೆ.
ಅಲ್ಲದೇ ಇದೇ ವೇಳೆ ನೋಟು ಅಮಾನ್ಯೀಕರಣದ ಬಗ್ಗೆಯೂ ಕೂಡ ಪ್ರಧಾನಿ ಪ್ರಸ್ತಾಪಿಸಿದ್ದು, ಇದರಿಂದ ನಿದ್ದೆ ಕಳೆದುಕೊಂಡವರು ಮಾತ್ರವೇ ವಿರೋಧ ವ್ಯಕ್ತಪಡಿಸಿದ್ದಾರೆ. ಬಡಜನರು ನನ್ನ ಉದ್ದೇಶವನ್ನು ಅರ್ಥ ಮಾಡಿಕೊಂಡಿದ್ದಾರೆ.
ನಾವು ದೀರ್ಘಾವಧಿಯ ಆಲೋಚನೆಗಳೊಂದಿಗೆ ಅನೇಕ ರೀತಿಯಾದ ಕಾರ್ಯಗಳನ್ನು ಕೈಗೊಂಡಿದ್ದೇವೆ. ನಮ್ಮ ಕಾರ್ಯಗಳು ಅಲ್ಪ ಕಾಲದ ಉಪಯೋಗಕ್ಕಲ್ಲ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.