ಬೆಂಗಳೂರು (ಆ.30): ದೆಹಲಿಯ ಫ್ಲಾಟ್ ಹಾಗೂ ಮನೆಯಲ್ಲಿ ದೊರೆತ ಏಳು ಕೋಟಿಗೂ ಅಧಿಕ ನಗದು ಹಾಗೂ ಆದಾಯ ಮೀರಿದ ಆಸ್ತಿಯ ಮೂಲ ಪ್ರಕರಣದ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ) ತಮ್ಮ ವಿರುದ್ಧ ಜಾರಿಗೊಳಿಸಿದ್ದ ಸಮನ್ಸ್ ಹಾಗೂ ಇ.ಡಿ. ನಡೆಸುತ್ತಿರುವ ತನಿಖೆಯನ್ನು ರದ್ದುಪಡಿಸುವಂತೆ ಕೋರಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಮತ್ತವರ ಆಪ್ತರು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್
ವಜಾಗೊಳಿಸಿದೆ.
ಇ.ಡಿ. ಸಮನ್ಸ್ ರದ್ದುಪಡಿಸುವಂತೆ ಕೋರಿ ಡಿ.ಕೆ.ಶಿವಕುಮಾರ್, ಆಪ್ತರಾದ ಸಚಿನ್ ನಾರಾಯಣ್, ರಾಜೇಂದ್ರ, ಆಂಜನೇಯ ಹನುಮಂತಯ್ಯ ಮತ್ತು ಸುನೀಲ್ ಕುಮಾರ್ ಶರ್ಮಾ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರು, ಅರ್ಜಿಗಳನ್ನು ತಿರಸ್ಕರಿಸಿ ಗುರುವಾರ ತೀರ್ಪು ಪ್ರಕಟಿಸಿದರು.
ಸದ್ಯ ಟ್ರಬಲ್ ಶೂಟರ್ ಎಂದೇ ಕರೆಸಿಕೊಳ್ಳುವ ಡಿಕೆ ಶಿವಕುಮಾರ್ ಅವರ ಮುಂದಿನ ದಾರಿ ಏನು ಎನ್ನುವ ಮಾಹಿತಿ ಇಲ್ಲಿದೆ.
ಮುಂದಿನ ದಾರಿ
1. ಇ.ಡಿ. ಸಮನ್ಸ್ ಜಾರಿ ಮಾಡಿದರೆ ವಿಚಾರಣೆಗೆ ಹಾಜರಾಗಿ ಸಮಜಾಯಿಷಿ ನೀಡಬಹುದು
2. ಬಂಧನ ಭೀತಿ ಇರುವುದರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಬಹುದು
3. ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬಹುದು
4. ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದರೆ ಶಿವಕುಮಾರ್‌ಗೆ ತಾತ್ಕಾಲಿಕ ರಿಲೀಫ್ ಸಿಗಬಹುದು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.