
ಹಾವೇರಿ: ಮತದಾರರೇ ನನ್ನ ಹೈಕಮಾಂಡ್. ನಾನು ಎಲ್ಲಿಯೂ ಹೋಗಿಲ್ಲ. ಎಂ.ಬಿ. ಪಾಟೀಲ್ ಸೇರಿದಂತೆ ಯಾರ ತಂಡದಲ್ಲಿಯೂ ನಾನಿಲ್ಲ ಎಂದು ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಅನೇಕರು ನನ್ನನ್ನು ಸಂಪರ್ಕಿಸಿದ್ದಾರೆ. ದುಡುಕಿನ ನಿರ್ಧಾರ ಬೇಡ ಎಂದಿದ್ದಾರೆ. ಸಚಿವ ಸ್ಥಾನ ಸಿಗದ್ದಕ್ಕೆ ಅಸಮಾಧಾನವಿದೆ. ಆದರೆ, ಗುಂಪುಗಾರಿಕೆ ಮಾಡಿಲ್ಲ. ನಾನು ಕ್ಷೇತ್ರದಲ್ಲಿಯೇ ಇದ್ದು, ಸೋಮವಾರ ಕಾರ್ಯಕರ್ತರೊಂದಿಗೆ ಚರ್ಚಿಸಿ ಅವರ ಸಲಹೆ ಮೇರೆಗೆ ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ ಎಂದರು.
ಹಳೆ ಧಾರವಾಡ ಜಿಲ್ಲೆಯ ಗದಗ, ಹಾವೇರಿ, ಧಾರವಾಡ ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಶಾಸಕರಿಗೆ ಮಂತ್ರಿ ಸ್ಥಾನ ಸಿಕ್ಕಿಲ್ಲ. ಹೀಗಾಗಿ ನನಗೆ ಕೊಡಿ ಎಂದು ಕೇಳಿದ್ದೇನೆ. ಸಚಿವ ಸ್ಥಾನ ಕೊಟ್ಟಿಲ್ಲ ಎಂದು ನಾನು ಯಾರ ಗುಂಪಿನೊಂದಿಗೂ ಹೋಗಿಲ್ಲ. ಬೇರೆ ಪಕ್ಷದವರು ನನ್ನನ್ನು ಸಂಪರ್ಕಿಸಿಲ್ಲ. ಈಗ ಸಚಿವ ಸ್ಥಾನ ಸಿಗದೇ ಇದ್ದರೂ ಮುಂದೆ ಒಳ್ಳೆಯ ದಿನಗಳು ಬರಬಹುದು. ಆ ದಿನಕ್ಕಾಗಿ ಕಾಯುತ್ತೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.