Gold and Silver Price: ಚಿನ್ನ - ಬೆಳ್ಳಿ ಇಂದಿನ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ

Published : May 13, 2022, 06:55 AM ISTUpdated : May 13, 2022, 08:12 AM IST
Gold and Silver Price: ಚಿನ್ನ - ಬೆಳ್ಳಿ ಇಂದಿನ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ

ಸಾರಾಂಶ

ಚಿನ್ನ ಮತ್ತು ಬೆಳ್ಳಿಯ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ದೊಡ್ಡದಿದೆ. ಜತೆಗೆ ಚಿನ್ನದ ಮೇಲಿನ ವ್ಯಾಮೋಹವೂ ಹಲವರಿಗಿದೆ. ಚಿನ್ನ ಮತ್ತು ಬೆಳ್ಳಿಯ ಬೆಲೆ ಪ್ರತಿನಿತ್ಯ ಏರುಪೇರಾಗುತ್ತದೆ. ಪ್ರತಿನಿತ್ಯದ ಬೆಲೆ ನೋಡಿಯೇ ಜನ ಹೂಡಿಕೆ ಮಾಡುತ್ತಾರೆ. ಹಾಗಾದರೆ ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ?

ಚಿನ್ನ ಮತ್ತು ಬೆಳ್ಳಿ ಅಂದರೆ ಬಹುತೇಕ ಮಹಿಳೆಯರಿಗೆ ಪ್ರಾಣ, ಮತ್ತು ಎಷ್ಟೋ ಕಷ್ಟದ ಸಮಯಗಳಲ್ಲಿ ಮನೆಯ ಆರ್ಥಿಕ ಸಮಸ್ಯೆಗಳಿಗೆ ಪರಿಹಾರವಾಗಿ ನಿಲ್ಲುವುದೇ ಮನೆಯಲ್ಲಿರುವ ಚಿನ್ನ. ಇದೇ ಕಾರಣಕ್ಕಾಗಿ ಕೆಲವರು ಆಪತ್ಕಾಲಕ್ಕಾಗಿ ಎಂದು ಚಿನ್ನದ ಮೇಲೆ ಹೂಡಿಕೆ ಮಾಡುತ್ತಾರೆ. ಇನ್ನು ಕೆಲವರು ಆಭರಣದ ಮೇಲಿನ ವ್ಯಾಮೋಹಕ್ಕಾಗಿ ಚಿನ್ನ ಕೊಳ್ಳುತ್ತಾರೆ. ಒಟ್ಟಿನಲ್ಲಿ ಚಿನ್ನ ಮತ್ತು ಬೆಳ್ಳಿಗೆ ಸದಾಕಾಲ ಬೇಡಿಕೆ ಇದ್ದೇ ಇದೆ. ಚಿನ್ನ ಮತ್ತು ಬೆಳ್ಳಿ ಇಂದಿನ ಬೆಲೆ ಈ ಕೆಳಗಿನಂತಿದೆ.

ಒಂದು ಗ್ರಾಂ (1GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,720
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,149

ಎಂಟು ಗ್ರಾಂ (8GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,760
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,192

ಹತ್ತು ಗ್ರಾಂ (10GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 47,200
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,490

ನೂರು ಗ್ರಾಂ (100GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,72,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,14,900

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್

ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,200 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ.48,381, ರೂ. 48,381 ರೂ. 47,200 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,200 ರೂ. ಆಗಿದೆ.

ಇಂದಿನ ಬೆಳ್ಳಿ ದರ

ನಿನ್ನೆಗೆ ಹೋಲಿಸಿದರೆ ಇಂದು ಭಾರತದಲ್ಲಿ ಬೆಳ್ಳಿ ದರದಲ್ಲಿ ಏರಿಕೆ ಕಂಡುಬಂದಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ.

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್

ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 608, ರೂ. 6, 080 ಹಾಗೂ ರೂ. 60,800 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ 65,500 ಆಗಿದ್ದರೆ ದೆಹಲಿಯಲ್ಲಿ 60,800 ಮುಂಬೈನಲ್ಲಿ 60,800 ಹಾಗೂ ಕೋಲ್ಕತ್ತದಲ್ಲೂ ರೂ. 60,800 ಗಳಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!