
ಗಾಂಧಿನಗರ(ಮೇ.24): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಒಂದು ಆದರ್ಶ ನಡೆಯಿಂದ ಇತರ ಜನಪ್ರತಿನಿಧಿಗಳಿಗೆ ಮಾದರಿಯಾಗಿದ್ದಾರೆ.
ಆಫ್ರಿಕನ್ ಡೆವಲಪ್‌ಮೆಂಟ್ ಬ್ಯಾಂಕ್‌ನ ಕಾರ್ಯಕ್ರಮಕ್ಕೆ ಆಗಮಿಸುವ ಸಲುವಾಗಿ ಗಾಂಧಿನಗರ-ಅಹ್ಮದಾಬಾದ್ ರಸ್ತೆಯಲ್ಲಿ ಮೋದಿ ಪ್ರಯಾಣಿಸುತ್ತಿದ್ದರು. ಆ ಸಂದರ್ಭದಲ್ಲಿ ತಾವು ಸಾಗುತ್ತಿದ್ದ ದಾರಿಯಲ್ಲಿ ಬಂದ ಆ್ಯಂಬುಲೆನ್ಸ್‌ಗೆ ದಾರಿ ಮಾಡಿಕೊಡುವ ಸಲುವಾಗಿ ತಮ್ಮ ಬೆಂಗಾವಲು ವಾಹನಗಳನ್ನು ನಿಲ್ಲಿಸಿ ದಾರಿ ಮಾಡಿಕೊಟ್ಟಿದ್ದಾರೆ. ಈ ಮೂಲಕ ಇತರರಿಗೂ ಮಾದರಿಯಾಗಿದ್ದಾರೆ.
ಪ್ರತಿಯೊಬ್ಬರು ವಿಐಪಿ ಎಂದು ಪ್ರತಿಪಾದಿಸಿದ್ದ ಮೋದಿಯವರು ಕಳೆದ ತಿಂಗಳಷ್ಟೇ ವಿಐಪಿ ವಾಹನಗಳ ಮೇಲಿನ ಕೆಂಪು ದೀಪಗಳನ್ನು ತೆಗೆಯುವ ನಿರ್ಧಾರ ಕೈಗೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.